Publish Date: Fri, 09 Apr 2021 (09:55 IST)
Updated Date: Fri, 09 Apr 2021 (09:57 IST)
ಬೆಂಗಳೂರು: ಕೊರೋನಾ ಕೇಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರೊಂದಿಗೆ ರಾತ್ರಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ನಾಳೆಯಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ರಾತ್ರಿ ಸಾರಿಗೆ ಬಸ್ ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.
ನಿನ್ನೆ ಪ್ರಧಾನಿ ಮೋದಿ ಜೊತೆಗಿನ ಸಭೆಯ ಬಳಿಕ ಸಿಎಂ ಯಡಿಯೂರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ. ಏಪ್ರಿಲ್ 10 ರಿಂದ ಏಪ್ರಿಲ್ 20 ರವರೆಗೆ ಸದ್ಯದ ಮಟ್ಟಿಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದಲ್ಲದೆ ಮಾಸ್ಕ್ ಹಾಕಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸ್ ಮಾಡುವುದು ಸೇರಿದಂತೆ ಜನರು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.