Select Your Language

Notifications

webdunia
webdunia
webdunia
webdunia

ಚನ್ನಪಟ್ಟಣದಲ್ಲಿ ಯೋಗೇಶ್ವರ್‌ಗೆ ಎದುರಾಳಿಯಾಗಿ ನಿಖಿಲ್‌, ಕೆಲವೇ ಹೊತ್ತಿನಲ್ಲಿ ಘೋಷಣೆ

Channapatna Assembly by-election

Sampriya

ರಾಮನಗರ , ಗುರುವಾರ, 24 ಅಕ್ಟೋಬರ್ 2024 (14:32 IST)
ರಾಮನಗರ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕಾವು ಮತ್ತಷ್ಟು ರಂಗೇರಿದೆ. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ನಾಮಪತ್ರ ಸಲ್ಲಿಸಿದ್ದಾರೆ. ಅವರ ವಿರುದ್ಧ ಯಾರು ಸ್ಪರ್ಧಿಸುತ್ತಿದ್ದಾರೆ ಎಂಬುದೂ ಭಾರೀ ಕುತೂಹಲ ಕೆರಳಿಸಿದೆ.

ಗುರುವಾರ ಸರಣಿ ಸಭೆ ನಡೆಸಿದ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಅಂತಿಮವಾಗಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್‌ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೆಲವೇ ಕ್ಷಣದಲ್ಲಿ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ನಿಖಿಲ್‌ ಕುಮಾರಸ್ವಾಮಿ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ವಿರುದ್ಧ ಪರಾಭವಗೊಂಡಿದ್ದರು. ಬಳಿಕ ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಇದೀಗ ನಾಯಕರ ಮತ್ತು ಕಾರ್ಯಕರ್ತರ ಒತ್ತಡಕ್ಕೆ ಮಣಿದು ಮತ್ತೆ ಕಣಕ್ಕೆ ಇಳಿಯಲು ಸಜ್ಜಾಗಿದ್ದಾರೆ.

ಮಂಡ್ಯ ಕ್ಷೇತ್ರ ಸಂಸದ ಎಚ್‌.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಕುಮಾರಸ್ವಾಮಿ ಮತ್ತು ಡಿ.ಕೆ. ಸಹೋದರರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆ ಅದ್ಧೂರಿ ಮೆರವಣಿಗೆ ಬಂದು ನಾಮಪತ್ರ ಸಲ್ಲಿಸಿದ ಸಿಪಿ ಯೋಗೇಶ್ವರ್