ಚನ್ನಪಟ್ಟಣದಲ್ಲಿ ಯೋಗೇಶ್ವರ್‌ಗೆ ಎದುರಾಳಿಯಾಗಿ ನಿಖಿಲ್‌, ಕೆಲವೇ ಹೊತ್ತಿನಲ್ಲಿ ಘೋಷಣೆ

Sampriya
ಗುರುವಾರ, 24 ಅಕ್ಟೋಬರ್ 2024 (14:32 IST)
ರಾಮನಗರ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕಾವು ಮತ್ತಷ್ಟು ರಂಗೇರಿದೆ. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ನಾಮಪತ್ರ ಸಲ್ಲಿಸಿದ್ದಾರೆ. ಅವರ ವಿರುದ್ಧ ಯಾರು ಸ್ಪರ್ಧಿಸುತ್ತಿದ್ದಾರೆ ಎಂಬುದೂ ಭಾರೀ ಕುತೂಹಲ ಕೆರಳಿಸಿದೆ.

ಗುರುವಾರ ಸರಣಿ ಸಭೆ ನಡೆಸಿದ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಅಂತಿಮವಾಗಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್‌ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೆಲವೇ ಕ್ಷಣದಲ್ಲಿ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ನಿಖಿಲ್‌ ಕುಮಾರಸ್ವಾಮಿ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ವಿರುದ್ಧ ಪರಾಭವಗೊಂಡಿದ್ದರು. ಬಳಿಕ ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಇದೀಗ ನಾಯಕರ ಮತ್ತು ಕಾರ್ಯಕರ್ತರ ಒತ್ತಡಕ್ಕೆ ಮಣಿದು ಮತ್ತೆ ಕಣಕ್ಕೆ ಇಳಿಯಲು ಸಜ್ಜಾಗಿದ್ದಾರೆ.

ಮಂಡ್ಯ ಕ್ಷೇತ್ರ ಸಂಸದ ಎಚ್‌.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಕುಮಾರಸ್ವಾಮಿ ಮತ್ತು ಡಿ.ಕೆ. ಸಹೋದರರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments