Publish Date: Sun, 18 Dec 2022 (10:02 IST)
Updated Date: Sun, 18 Dec 2022 (10:04 IST)
ರಾಮನಗರ : ಪುತ್ರನಿಗಾಗಿ ತಾಯಿ ಅನಿತಾ ಕುಮಾರಸ್ವಾಮಿ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್ ಸ್ಪರ್ಧಿಸಲಿದ್ದಾನೆ ಎಂದು ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ.
ರಾಮನಗರದ ಹಳೇ ಬಸ್ ನಿಲ್ದಾಣದಲ್ಲಿ ಪಂಚರತ್ನ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಖಿಲ್ ರಾಮನಗರದ ಅಭ್ಯರ್ಥಿ ಎಂದು ಪ್ರಕಟಿಸಿದ್ದಾರೆ. ನಿಖಿಲ್ ಹೆಸರು ಘೋಷಣೆ ಆಗುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ.
ನಾನು ದೇವರ ಮುಂದೆ ನಿಂತಾಗ ನನ್ನ ಪತಿ ಹಾಗೂ ಪುತ್ರನ ಏಳಿಗೆಯನ್ನು ಬಯಸುತ್ತೇನೆ. ಕೆಲವರು ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.