ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Krishnaveni K
ಗುರುವಾರ, 5 ಜೂನ್ 2025 (19:49 IST)
ಬೆಂಗಳೂರು: ಈ ಹಿಂದೆ ಚುನಾವಣೆ ಸಂದರ್ಭಗಳಲ್ಲಿ ಕುಮಾರಸ್ವಾಮಿ ಕಣ್ಣೀರು ಹಾಕ್ತಾರೆ ಎಂದು ವ್ಯಂಗ್ಯ ಮಾಡುತ್ತಿದ್ದರು ಡಿಕೆ ಶಿವಕುಮಾರ್. ಇದೀಗ ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಪ್ರತಿಕ್ರಿಯಿಸುವಾಗ ಡಿಕೆಶಿಯೇ ಕಣ್ಣೀರು ಹಾಕಿದ್ದಾರೆ. ಇದಕ್ಕೆ ನಿಖಿಲ್ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಪಾಪ ಮಕ್ಕಳನ್ನು ನೋಡಕ್ಕಾಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗಳ ಗಳನೆ ಅತ್ತಿದ್ದರು. ಅವರ ಅಳುವನ್ನು ಈಗ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಅವರಿಗೂ ಅಳು ಬರುತ್ತಾ? ನನಗೆ ಹಾಗನಿಸಲ್ಲಪ್ಪ ಎಂದು ವ್ಯಂಗ್ಯ ಮಾಡಿದ್ದಾರೆ. ಕ್ರಿಕೆಟಿಗರ ಜೊತೆ ರೀಲ್ಸ್, ಸೆಲ್ಫೀ ತೆಗೆಸಿಕೊಂಡಿದ್ದಾರೆ. ಆರ್ ಸಿಬಿ ಅಭಿಮಾನಿಗಳು ಸಾಯುತ್ತಿದ್ದರೆ ಕ್ರಿಕೆಟಿಗರರ ಜೊತೆ ಕಪ್ ಎತ್ತಿಕೊಂಡು, ಕಪ್ ಗೆ ಮುತ್ತಿಕ್ಕಿ ಸಂಭ್ರಮಿಸುತ್ತಿದ್ದರು. ಅವರಿಗೆ ನಾಚಿಕೆಯಾಗಲ್ವಾ ಎಂದು ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ಚನ್ನರಾಯಪಟ್ಟಣ ವಿಧಾನಸಭೆ ಚುನಾವಣೆ ಪ್ರಚಾರ ವೇಳೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದರು. ಇದಕ್ಕೆ ಮೊದಲು ಕುಮಾರಸ್ವಾಮಿ ಕಣ್ಣೀರು ಹಾಕಿದಾಗಲೆಲ್ಲಾ ಡಿಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದರು. ಇದೀಗ ನಿಖಿಲ್ ಕುಮಾರಸ್ವಾಮಿ ಈ ರೀತಿ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments