Daily Horoscope
✕

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಸಂಪ್ರಿಯ
ಸೋಮವಾರ, 29 ಜೂನ್ 2026 (22:30 IST)
ಚಿಕ್ಕಬಳ್ಳಾಪುರ: ಪ್ರದೀಪ್ ಈಶ್ವರ್ ಮೇಲಿನ ಚಪ್ಪಲಿ ಎಸೆತ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ  ಜೆಡಿಎಸ್  ಹಾಗೂ ಬಿಜೆಪಿ(BJP) ಕಾರ್ಯಕರ್ತರನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಭೇಟಿಮಾಡಿದರು. ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಅಮಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಜೆಡಿಎಸ್ ಕಾರ್ಯಕರ್ತ ಅಖಿಲ್ ರೆಡ್ಡಿ ಬಂಧನದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಮವಾರ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದರು. ಮೊದಲು ಅಖಿಲ್ ರೆಡ್ಡಿ ಅವರ ಮನೆಗೆ ಭೇಟಿ ನೀಡಲು ನಿಗದಿಯಾಗಿದ್ದರೂ, ಬಳಿಕ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿ ಮಧ್ಯಾಹ್ನ 1 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಕನಕನೂರು ಸಮೀಪದ ಜಿಲ್ಲಾ ಕಾರಾಗೃಹಕ್ಕೆ ತೆರಳಿದರು.

ಜೈಲಿನಲ್ಲಿರುವ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 9 ಮಂದಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ವೇಳೆ ಜೆಡಿಎಸ್ ಶಾಸಕ ರವಿ, ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ, ತೂಪಲ್ಲಿ ಚೌಡರೆಡ್ಡಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಸೇರಿದಂತೆ ಹಲವು ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಇದ್ದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ನಾಯಕರ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಅವಹೇಳನಕಾರಿಯಾಗಿ ಮಾತನಾಡಿದ್ದರು. ಅದೇ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು. ಪೊಲೀಸರು ಅಮಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರನ್ನು ಬೆದರಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಜೈಲಿನಲ್ಲಿರುವವರು ಅಪರಾಧ ಮಾಡುವ ಮನಸ್ಥಿತಿಯವರಲ್ಲ ಎಂದು ಆರೋಪ ಮಾಡಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರಿ ರಸ್ತೆ ಬದಿಯ ಆಸ್ತಿ ಖರೀದಿ ಮಾಡುವಾಗ ಮುನ್ನೆಚ್ಚರಿಕೆ ವಹಿಸಿ: ಮುಂದೆ ಎದುರಾಗಬಹುದು ದೊಡ್ಡ ತೊಂದರೆ

ಕೆಲಸದ ಸ್ಥಳದಲ್ಲಿ ಬಾಸ್ನಿಂದ ಲೈಂಗಿಕ ಕಿರುಕುಳ: ಮಹಿಳೆಯರು ಯಾರಿಗೆ ದೂರು ನೀಡಬೇಕು, ಕಾನೂನು ಮಾರ್ಗಗಳು ಇಲ್ಲಿವೆ

ಹೌದೌದು ರಾಹುಲ್ ಗಾಂಧಿ ಆಲೂಗಡ್ಡೆಯಿಂದ ಚಿನ್ನ ಹೇಗೆ ತೆಗೀತಾರೆ ಎಂದು ನೋಡಲು ಫೋನ್ ಟ್ಯಾಪ್ ಮಾಡಿದ್ದೆವು: ಬಿಜೆಪಿ ಸಂಸದನ ವ್ಯಂಗ್ಯ Video

Karnataka Weather: ಭಾನುವಾರ ರಾಜ್ಯದ ಯಾವ ಜಿಲ್ಲೆಗಳಲ್ಲಿ ಹೇಗಿರಲಿದೆ ಹವಾಮಾನ

ನನ್ನ ಹತ್ರ ಕಾಸಿರಲಿಲ್ಲ, ಅದಕ್ಕೆ ನನ್ನ ಟಿಕೆಟ್ ನ್ನೂ ಮೋದಿಯವರೇ ತಗೊಂಡ್ರು: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments