ಪತ್ನಿ, ಅಪ್ಪನ ಕೈ ಹಿಡಿದು ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Sampriya
ಶುಕ್ರವಾರ, 25 ಅಕ್ಟೋಬರ್ 2024 (15:08 IST)
Photo Courtesy X
ರಾಮನಗರ: ಕರ್ನಾಟಕ ಲೋಕಸಭೆ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರವಾದ ಚನ್ನಪಟ್ಟಣ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಇಂದು ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಭರ್ಜರಿ ಶೋ ಬಳಿಕ ತಾಲ್ಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ರೋಡ್‌ ಶೋನಲ್ಲಿ ನಿಖಿಲ್ ಕುಮಾರಸ್ವಾಮಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ, ಸಂಸದ ಡಾ.ಮಂಜುನಾಥ್ ಸೇರಿ ಜೆಡಿಎಸ್‌ನ ಶಾಸಕರು, ಮಾಜಿ ಸಚಿವರು ಸಾಥ್ ನೀಡಿದರು.

ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್‌ನ ಸುಮಾರು 20 ಸಾವಿರ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.  ರೋಡ್ ಶೋ ಬಳಿಕ ತಾಲೂಕು ಕಚೇರಿಗೆ ಆಗಮಿಸಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಈ ಬಾರಿ ಚಕ್ರವ್ಯೂಹ ಬೇಧಿಸುವ ಶಕ್ತಿ ಚನ್ನಪಟ್ಟಣದ ಜನ ನೀಡುತ್ತಾರೆ. ಹಣ ಬಲ, ತೋಳ್ಬಲ ಯಾವುದೂ ನಡೆಯಲ್ಲ. ಚನ್ನಪಟ್ಟಣ ಜನ ನಮ್ಮ ಅಭಿವೃದ್ಧಿ ಕೆಲಸಗಳಿಗೆ ನಮಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಚುನಾವಣೆ ಫಲಿತಾಂಶ ದಿನವೇ ವಿದೇಶಕ್ಕೆ ಹಾರಲಿರುವ ರಾಹುಲ್ ಗಾಂಧಿ: ತಿಂಗಳಂತ್ಯದವರೆಗೂ ಫಾರಿನ್ ಟೂರ್

ಸಿದ್ದರಾಮಯ್ಯಗೆ ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸೋ ಚಾಳಿ: ಸಿಟಿ ರವಿ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಮುಂದಿನ ಸುದ್ದಿ
Show comments