Publish Date: Thu, 21 Mar 2019 (09:51 IST)
Updated Date: Thu, 21 Mar 2019 (09:53 IST)
ಬೆಂಗಳೂರು : ಮಂಡ್ಯ ಕ್ಷೇತ್ರದ ಚುನಾವಣೆಗಾಗಿ ಮೈತ್ರಿಸರ್ಕಾರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬುಧವಾರ ಅಪಾರ ಅಭಿಮಾನಿಗಳೊಂದಿಗೆ ಸುಮಲತಾ ಅವರು ಭರ್ಜರಿಯಾಗಿ ನಾಮಿನೇಷನ್ ಮಾಡಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇಂದು ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ . ಬೆಳಗ್ಗೆ 11 ಗಂಟೆಯಿಂದ 12 ಗಂಟೆಯೊಳಗೆ ನಿಖಿಲ್, ತಮ್ಮ ತಾತ, ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.
ಜ್ಯೋತಿಷಿಗಳ ಸಲಹೆಯಂತೆ ಸಮಯ ನಿಗದಿಪಡಿಸಲಾಗಿದೆ. ಗುರುವಾರ ನಾಮಪತ್ರ ಸಲ್ಲಿಸಿದ್ರೆ ಗುರುಬಲ ಕೂಡಿಬರಲಿದೆ ಅನ್ನೋ ನಂಬಿಕೆಯಿಂದಾಗಿ ಇಂದು ನಾಮಿನೇಷನ್ ಮಾಡಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.