ಬೆಂಗಳೂರು: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಪಿತೂರಿ ವಿರೋಧಿಸಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಯಾತ್ರೆಗೆ ಜನ ಟಾಂಗ್ ಕೊಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಕಾಮೆಂಟ್ ಮಾಡಿದ್ದು ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿದ್ದ ಮಹಿಳೆಯರ ಮನೆಗೂ ಭೇಟಿ ಕೊಡಿ ಎಂದಿದ್ದಾರೆ.
ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಿನ್ನ ಜೆಡಿಎಸ್ ನಾಯಕರು, ಕಾರ್ಯಕರ್ತರು ಧರ್ಮಸ್ಥಳ ಚಲೋ ಯಾತ್ರೆ ಹಮ್ಮಿಕೊಂಡಿದ್ದರು. ಈ ಮೂಲಕ ಧರ್ಮಸ್ಥಳ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜೊತೆ ನಾವಿದ್ದೇವೆ ಎಂದು ಗುಡುಗಿದ್ದರು.
ಅವರ ಈ ಯಾತ್ರೆಯ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದಾರೆ. ಹಾಸನದಿಂದ ಯಾತ್ರೆ ಶುರು ಮಾಡಿದ್ದೀರಿ, ಅಲ್ಲಿಯೇ ಪ್ರಜ್ವಲ್ ರೇವಣ್ಣನಿಂದ ಅನ್ಯಾಯಕ್ಕೊಳಗಾದ ಅನೇಕ ಮಹಿಳೆಯರಿದ್ದಾರೆ. ಅವರ ಮನೆಗೂ ಭೇಟಿ ಕೊಡಿ ಎಂದು ಕೆಲವರು ಕಾಲೆಳೆದಿದ್ದಾರೆ.
ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿಬಂದಿತ್ತು. ಈ ಪೈಕಿ ಒಂದು ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆಯಾಗಿದೆ. ಇದನ್ನೇ ಉಲ್ಲೇಖಿಸಿ ನೆಟ್ಟಿಗರು ವ್ಯಂಗ್ಯ ಮಾಡಿದ್ದಾರೆ.