Publish Date: Fri, 07 Jun 2019 (11:50 IST)
Updated Date: Fri, 07 Jun 2019 (11:52 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ನಾಯಕರೊಳಗೆ ಎಲ್ಲವೂ ಸರಿಯಿಲ್ಲ ಎಂದು ಗುಸು ಗುಸು ನಡೆದಿರುವ ಹೊತ್ತಲ್ಲೇ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿಡಿಯೋ ಒಂದರ ಕುರಿತು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ನಿಖಿಲ್ ಕುಮಾರಸ್ವಾಮಿ ಇತ್ತೀಚೆಗಷ್ಟೇ ಮಂಡ್ಯದಲ್ಲೇ ಮನೆ ಮಾಡಿ ರಾಜಕೀಯ ಭವಿಷ್ಯ ಕಂಡುಕೊಳ್ಳುವುದಾಗಿ ಹೇಳಿದ್ದರು.
ಅದರ ಬೆನ್ನಲ್ಲೇ ಇದೀಗ ತಮ್ಮ ಕಾರ್ಯಕರ್ತರಿಗೆ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಬರಬಹುದು. ಅದು ಮುಂದಿನ ವರ್ಷ ಅಥವಾ ಎರಡು ವರ್ಷದೊಳಗೇ ಇರಬಹುದು. ಯಾವುದಕ್ಕೂ ಎದುರಿಸಲು ಸಿದ್ಧರಾಗಿ ಎಂದು ಕರೆ ಕೊಡುವ ವಿಡಿಯೋ ಒಂದನ್ನು ಜೆಡಿಎಸ್ ಕಾರ್ಯಕರ್ತರೇ ಹರಿಯಬಿಟ್ಟಿರುವುದಾಗಿ ಆಂಗ್ಲ ಮಾಧ್ಯಮ ವರದಿ ಮಾಡಿದೆ. ಇದರ ಸತ್ಯಾಸತ್ಯತೆ ತಿಳಿದುಬರಬೇಕಿದೆಯಷ್ಟೇ.