Select Your Language

Notifications

webdunia
webdunia
webdunia
webdunia

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್‌ಗೆ ಹ್ಯಾಟ್ರಿಕ್‌ ಸೋಲು: ಮನನೊಂದು ಅಭಿಮಾನಿ ಆತ್ಮಹತ್ಯೆಗೆ ಯತ್ನ

Channapatna assembly constituency by-election

Sampriya

ರಾಮನಗರ , ಭಾನುವಾರ, 24 ನವೆಂಬರ್ 2024 (11:21 IST)
Photo Courtesy X
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿರುವುದಕ್ಕೆ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚನ್ನಪಟ್ಟಣದ ಕೂಡ್ಲೂರು ಬಳಿಯ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದವರು. ಸದ್ಯ ವ್ಯಕ್ತಿಗೆ ಮಂಡ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾನು ನಿಖಿಲ್ ಅಭಿಮಾನಿ, ನನ್ನ ಸಾವಿಗೆ ನಾನೇ ಕಾರಣ, ಜೈ ಜೆಡಿಎಸ್ ಎಂದು ಪತ್ರ ಬರೆದಿಟ್ಟು ಅವರು ವಿಷ ಸೇವನೆ ಮಾಡಿಕೊಂಡಿದ್ದಾರೆ.

ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂದು ಮೈತ್ರಿ ನಾಯಕರು ಭಾವಿಸಿದ್ದರೂ ನಿಖಿಲ್ ಸೋಲನುಭವಿಸಿದ್ದಾರೆ. ಇದರೊಂದಿಗೆ, ನಿಖಿಲ್ ಸತತ ಮೂರು ಚುನಾವಣೆಗಳಲ್ಲಿ ಸೋಲನುಭವಿಸಿದ್ದಾರೆ. ಇದರಿಂದ ಅವರ ಅಭಿಮಾನಿ ಮನನೊಂದಿದ್ದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ್​ಗೆ 1,12,642 ಮತ ದೊರೆತರೆ, ಎನ್​ಡಿಎ ಅಭ್ಯರ್ಥಿ ನಿಖಿಲ್‌ಗೆ 87,229 ಮತಗಳು ದೊರೆತಿವೆ. ಪಕ್ಷೇತರ ಅಭ್ಯರ್ಥಿಗಳಾದ ನಿಂಗರಾಜುಗೆ 2352, ಜೆ.ಟಿ.ಪ್ರಕಾಶ್‌ಗೆ 1649 ಮತಗಳು ದೊರೆತಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಪ ಚುನಾವಣೆಯಲ್ಲಿ ಖಾತೆ ತೆರೆಯದ ʻಜನ್‌ ಸೂರಜ್‌ʼ: ಪ್ರಶಾಂತ್ ಕಿಶೋರ್‌ಗೆ ಬಿಹಾರದಲ್ಲಿ ಭಾರೀ ಮುಖಭಂಗ