Publish Date: Mon, 10 Apr 2023 (19:40 IST)
Updated Date: Mon, 10 Apr 2023 (19:00 IST)
ಪ್ರಚಾರಕ್ಕೆ ಬಂದ JDS ನಾಯಕ, ನಟ ನಿಖಿಲ್ ಕುಮಾರಸ್ವಾಮಿಗೆ ರಾಮನಗರದ ದೊಡ್ಡಬಾದಿಗೆರೆ ಗ್ರಾಮದ ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮೂಲಭೂತ ಸೌಕರ್ಯ ಒದಗಿಸದೇ ಪ್ರಚಾರಕ್ಕೆ ಬಂದ್ರೆ ಯಾರೂ ವೋಟ್ ಕೊಡಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ನಮಗೆ ಕುಡಿಯುವ ನೀರಿನ ಸೌಲಭ್ಯ ಇಲ್ಲ, ಚರಂಡಿ ವ್ಯವಸ್ಥೆ ಇಲ್ಲ. ನಿಮ್ಮ ತಾಯಿ ಅನಿತಾ ಕುಮಾರಸ್ವಾಮಿ ಬಂದು ಗುದ್ದಲಿ ಪೂಜೆ ಮಾಡಿದ್ದರು. ಆದರೆ ಕೆಲಸ ಪೂರ್ಣ ಆಗಿಲ್ಲ, ನಮ್ಮ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಹಾಗಾಗಿ ನಾವು ಮತ ಹಾಕಲ್ಲ ಎಂದು ಮಹಿಳೆಯರು ನಿಖಿಲ್ಗೆ ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡಿದ್ದಾರೆ.. ಈ ವೇಳೆ ನಿಖಿಲ್ ಸಮಾಧಾನದಿಂದಲೇ ಮಹಿಳೆಯರ ಅಳಲನ್ನು ಆಲಿಸಿದ್ದಾರೆ, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.