Publish Date: Wed, 18 Dec 2019 (16:35 IST)
Updated Date: Wed, 18 Dec 2019 (16:36 IST)
ನಿರ್ಭಯಾ ಕೇಸ್ ನಲ್ಲಿ ಅತ್ಯಾಚಾರ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿರೋದಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ನೀಡಿರೋ ತೀರ್ಪು ಸ್ವಾಗತಾರ್ಹವಾಗಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವವರಿಗೆ ಇದೊಂದು ಎಚ್ಚರಿಕೆ ಗಂಟೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ರೈತರ ಹೊಲಕ್ಕೆ ನೀರು ಹರಿಸುವುದು ಹಾಗೂ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಮುಂಬರುವ ಆರು ತಿಂಗಳ ಒಳಗಾಗಿ ರಾಜ್ಯದ ಅಭಿವೃದ್ಧಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆ ಆಗಲಿದೆ ಎಂದರು.