Webdunia - Bharat's app for daily news and videos

Install App

ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ರಾಜ್ಯಕ್ಕೆ ನೀಡಿದ್ದು ಬರೀ ಚೊಂಬು: ಸಿದ್ದರಾಮಯ್ಯ

Sampriya
ಮಂಗಳವಾರ, 23 ಜುಲೈ 2024 (17:31 IST)
ಬೆಂಗಳೂರು: ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಲೇವಾಡಿ ಮಾಡಿದ್ದಾರೆ.

ಕೇಂದ್ರದ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು,  ಪ್ರಧಾನ ಮಂತ್ರಿಗಳ ಕುರ್ಚಿ ಉಳಿಸೋಕೆ ಆಂಧ್ರ ಮತ್ತು ಬಿಹಾರಕ್ಕೆ ವಿಶೇಷ ಅನುದಾನ ಕೊಟ್ಟಿದ್ದಾರೆ. ಕರ್ನಾಟಕದಿಂದ ಆರಿಸಿ ಹೋಗಿರುವ ನಿರ್ಮಲಾ ಸೀತರಾಮನ್ ರಾಜ್ಯದ ನಿರೀಕ್ಷೆ ಸುಳ್ಳು ಮಾಡಿ ಅನ್ಯಾಯ ಎಸಗಿದ್ದಾರೆ ಎಂದರು.

ರಾಜ್ಯದಿಂದ ನಾವು ಇಟ್ಟ ಬೇಡಿಕೆಗಳು, ಅವರೇ ಕೊಟ್ಟ ಭರವಸೆಗಳು ಎರಡನ್ನೂ ಈಡೇರಿಸಿಲ್ಲ. ಕಲ್ಯಾಣ ಕರ್ನಾಟಕಕ್ಕೆ ನಾವು 5000 ಕೋಟಿ ಕೊಟ್ಡಿದ್ದೇವೆ. ಇದಕ್ಕೆ ಹೊಂದಾಣಿಕೆ ಅನುದಾನ ಕೇಳಿದ್ದೆವು. ಇದನ್ನೂ ಕೊಡಲಿಲ್ಲ. ಈ ಬಜೆಟ್ ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರೈತರು 5 ವರ್ಷಗಳಿಂದ MSP ಗೆ ಕಾಯ್ದೆ ಮಾಡಬೇಕು ಎನ್ನುವ ಡಿಮ್ಯಾಂಡ್ ಇಟ್ಟಿದ್ದರು. ಈ ಬಗ್ಗೆ ಬಜೆಟ್ ನಲ್ಲಿ ಚಕಾರವನ್ನೇ ಎತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಶಿಕ್ಷಣಕ್ಕೆ ಫೆಬ್ರವರಿ ಬಜೆಟ್ ನಲ್ಲಿ 1.21 ಲಕ್ಷ  ಕೋಟಿ ಕೊಟ್ಡು ಈಗ  ಇದನ್ನು 1.25 ಮಾಡಿದ್ದಾರೆ  ಅಷ್ಟೆ

ಐಟಿ ಮತ್ತು ಸಂವಹನ ಕ್ಷೇತ್ರಕ್ಕೆ ಫೆಬ್ರವರಿಯಲ್ಲಿ 1.37 ಲಕ್ಷ ಕೋಟಿ ಇತ್ತು. ಈಗ ಇದನ್ನು 1.16 ಲಕ್ಷ ಕೋಟಿಗೆ ಇಳಿಸಿದ್ದಾರೆ

*ಐದು ಜನ‌ ಕೇಂದ್ರ ಸಚಿವರು ರಾಜ್ಯದವರು. ಈ‌ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ.

ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರಗಳಿಗೆ ಫೆಬ್ರವರಿಗಿಂತ ಗಣನೀಯವಾಗಿ ಅನುದಾನಗಳನ್ನು ಕಡಿತಗೊಳಿಸಿದ್ದಾರೆ

ಫೆರಿಫೆರಲ್ ರಿಂಗ್ ರಸ್ತೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ನಿರ್ಮಲಾ ಸೀತರಾಮನ್ ಅವರು ತಾವೇ ಈ ಹಿಂದೆ ಘೋಷಿಸಿದ್ದ ಅನುದಾನವನ್ನೂ ನೀಡಿಲ್ಲ

SC/ST ಮತ್ತು ಅಲ್ಪಸಂಖ್ಯಾತ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಲ್ಲೂ ಗಣನೀಯವಾಗಿ ಕಡಿತಗೊಳಿಸಿರುವುದು ಈ ಸಮುದಾಯಗಳಿಗೆ ಎಸಗಿರುವ ದ್ರೋಹ

ಮೋದಿ ಸರ್ಕಾರ ಮತ್ತು ಈ ಸರ್ಕಾರದ ಬಜೆಟ್ ಮೇಲೆ ಯಾವ ಭರವಸೆಗಳೂ ಇಲ್ಲ. ಹಿಂದನ ಬಜೆಟ್ ನಲ್ಲಿ ಅವರೇ ಘೋಷಿಸಿದ್ದನ್ನೇ ಇವತ್ತಿನವರೆಗೂ ಜಾರಿ ಮಾಡಿಯೇ ಇಲ್ಲ. ಹೀಗಾಗಿ ಈ ಬಾರಿ ಕೈಗಾರಿಕಾ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿರುವುದು ಕೇವಲ ಘೋಷಣೆಯಾಗಿ ಮಾತ್ರ ಉಳಿಯಲಿದೆ

ಬಜೆಟ್ ಪೂರ್ವ ಸಭೆಗೆ ನಿರ್ಮಲಾ ಸೀತರಾಮನ್ ಅವರು ನಮಗೂ ಆಹ್ವಾನಿಸಿದ್ದರು. ಈಗ ನೋಡಿದ್ರೆ ಯಾವ ಸಾರ್ಥಕತೆಗೆ ಕರೆದದ್ದು ಅನ್ನಿಸುತ್ತಿದೆ

ದಕ್ಷಿಣ ಭಾರತದಲ್ಲಿ ಆಂದ್ರ ಹೊರತುಪಡಿಸಿ ಉಳಿದ ಯಾವ ರಾಜ್ಯಗಳಿಗೂ ಏನೂ ಸಿಕ್ಕಿಲ್<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments