Daily Horoscope

Select Your Language

Notifications

webdunia
webdunia
webdunia
webdunia

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಕೊಡಗು ಪ್ರವಾಹ ಪರಿಶೀಲನೆಗೆ ಮಾಧ್ಯಮಗಳಿಗೆ ನೋ ಎಂಟ್ರಿ

ನಿರ್ಮಲಾ ಸೀತಾರಾಂ
ಕೊಡಗು: ಕೊಡಗು ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾದಾಪುರಕ್ಕೆ ತೆರಳಿ ಅಲ್ಲಿ ಹಾನಿಗೀಡಾದ ಪ್ರದೇಶಗಳ ಪರಿಶೀಲನೆ ನಡೆಸಿದ ಸಚಿವೆ ನಿರ್ಮಲಾ ಸೀತಾರಾಂ ರಕ್ಷಣಾ ಕಾರ್ಯಪಡೆಗಳು, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಅಲ್ಲದೆ, ಸಂತ್ರಸ್ತರ ಸ್ಥಿತಿ ಗತಿಗಳ ಬಗ್ಗೆಯೂ ತಿಳಿದುಕೊಂಡರು.

ಆದರೆ ಸಚಿವರ ಪರಿಶೀಲನೆ ಬಗ್ಗೆ ಚಿತ್ರೀಕರಿಸಲು ಮಾಧ್ಯಮಗಳಿಗೆ ಪೊಲೀಸರು ಅವಕಾಶ ನೀಡಲಿಲ್ಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆಯಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿತ್ತು. ಸಚಿವರ ಪರಿಶೀಲನೆ ವೇಳೆ ಸಂಸದ ಪ್ರತಾಪ್ ಸಿಂಹ ಕೂಡಾ ಜತೆಯಿದ್ದರು. ತಮ್ಮ ಕೆಲಸ ಮುಗಿಸಿ ಇದೀಗ ಸಚಿವರು ಮಡಿಕೇರಿಯತ್ತ ತೆರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೊಫೆಸರ್ ಕರಿನ್ ಮಿಚೆಲ್ ತೆಂಗಿನೆಣ್ಣೆ ಬಗ್ಗೆ ಹೇಳಿದ್ದು ಕೇಳಿದ್ರೆ ಶಾಕ್ ಆಗ್ತೀರಾ