Select Your Language

Notifications

webdunia
webdunia
webdunia
webdunia

ಸ್ವಚ್ಛತಾ ಅಭಿಯಾನದಲ್ಲಿ ಸ್ವತಃ ಕಸ ಗುಡಿಸಿ ಗಮನ ಸೆಳೆದ ನಿರ್ಮಲಾ ಸೀತರಾಮನ್

Central Minister Nirmala Sitharaman
Photo Credit X
ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇಂದು ಬಿಜೆಪಿ ವತಿಯಿಂದ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೊರಕೆ ಹಿಡಿದು, ಬಿದ್ದಿದ್ದ ಕಸವನ್ನು ಗುಡಿಸಿ, ಗಮನ ಸೆಳೆದರು. 

ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕ ಎಸ್. ಸುರೇಶ್ ಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮುಖಂಡರು, ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರು ಇದೇವೇಳೆ ದೇವರಿಗೆ ಪೂಜೆ ಸಲ್ಲಿಸಿದರು. ಕೇಂದ್ರ ಸಚಿವರಿಗೆ ವ್ಯಾಪಾರಿಗಳು ತಮ್ಮ ವಿವಿಧ ಬೇಡಿಕೆಗಳ ಮನವಿಪತ್ರವನ್ನು ಸಮರ್ಪಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

Rain Alert: ಕರಾವಳಿಯ ಮೂರು ಜಿಲ್ಲೆಗಳಿಗೆ ಅಲರ್ಟ್‌ ಘೋಷಿಸಿದ ಇಲಾಖೆ