Select Your Language

Notifications

webdunia
webdunia
webdunia
webdunia

ಕಾಂತಾರ’ ಮೆಚ್ಚಿದ ನಿರ್ಮಲಾ ಸೀತಾರಾಮನ್

Nirmala Sitharaman liked Kantara
bangalore , ಗುರುವಾರ, 3 ನವೆಂಬರ್ 2022 (18:10 IST)
ಕಾಂತಾರ ಸಿನಿಮಾ ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಲಿವುಡ್​ನಲ್ಲಂತೂ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ನೋಡಿದ ಅನೇಕರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನವನ್ನು ಎಲ್ಲರೂ ಹೊಗಳಿದ್ದಾರೆ. ಈಗ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸರದಿ. ನಿರ್ಮಲಾ ಅವರು ಕಾಂತಾರ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಸಿನಿಮಾ ಅದ್ಭುತವಾಗಿದೆ ಎಂದು ಹೊಗಳಿದ್ದಾರೆ. ಇದರಿಂದ ಕಾಂತಾರ ತಂಡ ಖುಷಿಯಾಗಿದೆ. ನಿರ್ಮಲಾ ಸೀತಾರಾಮನ್ ಅವರು ತಮ್ಮ ಕೆಲಸಗಳ ಮಧ್ಯೆಯೂ ಬೆಂಗಳೂರಿನ ಗರುಡ ಮಾಲ್​ನಲ್ಲಿ ಸಿನಿಮಾ ವೀಕ್ಷಿಸಿದ್ದಾರೆ. ಚಿತ್ರ ನೋಡಿದ ನಂತರದ ಫೋಟೋವನ್ನು ಹಂಚಿಕೊಂಡಿರುವ ನಿರ್ಮಲಾ ಅವರು, ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.  ರಿಷಬ್ ಅವರೇ ಸಿನಿಮಾನ ಉತ್ತಮವಾಗಿ ಮಾಡಿದ್ದೀರಿ. ತುಳುನಾಡು ಮತ್ತು ಕರಾವಳಿಯ ಶ್ರೀಮಂತ ಸಂಪ್ರದಾಯವನ್ನು ಚಿತ್ರ ಸೆರೆ ಹಿಡಿದಿದೆ ಎಂದು ನಿರ್ಮಲಾ ಟ್ವೀಟ್ ಮಾಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗುಂಪಾಗಿ ರಸ್ತೆದಾಟಿದ ಗಜಪಡೆಗಳು