ಬೆಂಗಳೂರು : ಅಡಿಕೆ ಮರಗಳಿಗೆ ಎಲೆ ಚುಕ್ಕಿರೋಗ ಹರಡುತ್ತಿದ್ದು, ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿ ಭಾರೀ ನಷ್ಟ ಅನುಭವಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರ ನೆರವಿಗೆ ಧಾವಿಸಬೇಕೆಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಮಲೆನಾಡು ಪ್ರಾಂತ್ಯವಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಲ್ಲಿ ಅತಿಯಾದ ಮಳೆಯಾಗುತ್ತಿದೆ. ಇದರಿಂದ ಈ ಭಾಗದ ರೈತರ ಜೀವನಾಧಾರವಾಗಿರುವ ಅಡಿಕೆ, ಕಾಫಿ, ಮೆಣಸು ಬೆಳೆಗಳು ಶೇ.90ರಷ್ಟು ಹಾನಿಗೊಳಗಾಗಿವೆ.
ಅಡಿಕೆ ಮರಗಳಿಗೆ ದಶಕಗಳಿಂದಲೂ ಭಾದಿಸುತ್ತಿರುವ ಹಳದಿ ರೋಗದಿಂದ ಅಡಿಕೆ ಬೆಳೆ ಸಂಪೂರ್ಣ ನಾಶವಾಗಿ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.