Publish Date: Tue, 03 Oct 2023 (17:25 IST)
Updated Date: Tue, 03 Oct 2023 (17:27 IST)
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಸಂಕಷ್ಟ ಸೂತ್ರ ಕುರಿತಂತೆ ನ್ಯಾಯಾಧೀಕರಣದ ಬಳಿ ನಿಖರ ಅಂಕಿ-ಅಂಶಗಳಿಲ್ಲ. ಈ ಕುರಿತಂತೆ ರಾಜ್ಯ ಸರ್ಕಾರ ಕಾನೂನು ತಜ್ಞರೊಂದಿಗೆ ಚರ್ಚಿಸಿ ಸಂಕಷ್ಟ ಸೂತ್ರ ಸಿದ್ಧಪಡಿಸಿಕೊಂಡು ಮುನ್ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಸಂಕಷ್ಟ ಸೂತ್ರ ಸಿದ್ಧಪಡಿಸಿಕೊಂಡು ಕಾನೂನು ಹೋರಾಟ ನಡೆಸುವುದರಿಂದ ಮಾತ್ರ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯ ಎಂದ್ರು.