ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಬೇಡ ಎಂದು ಬಿಜೆಪಿ ನಾಯಕರಿಗೆ ಬಿ.ಎಸ್.ಯಡಿಯೂರಪ್ಪ ಸ್ಪಷ್ಟ ಸೂಚನೆ ನೀಡಿದ್ದಾರೆ.
ಬಿಬಿಎಂಪಿಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಮಾಜಿ ಸಚಿವ ಆರ್.ಅಶೋಕ್, ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಗೆ ಮುದಾಗಿದ್ದಾರೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಬೆಂಗಳೂರಿನ ಶಾಸಕರು ಬಿಬಿಎಂಪಿಯಲ್ಲಿ ಅಧಿಕಾರವಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಗೆಲುವಿಗೆ ಸಹಕಾರಿಯಾಗುತ್ತದೆ ಎನ್ನುವ ಹಿನ್ನೆಲೆಯಲ್ಲಿ ಹಿಂಬಾಗಿಲಿನಿಂದ ಜೆಡಿಎಸ್ ನಾಯಕರೊಂದಿಗೆ ಚರ್ಚೆ ಆರಂಭಿಸಿದ್ದರು ಎನ್ನಲಾಗಿದೆ.
ಮುಂಬರುವ 2018ರ ವರೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಬೇಡ, ಇಲ್ಲವಾದಲ್ಲಿ ಜನತೆಯ ವಿಶ್ವಾಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಬಿಜೆಪಿ ನಿರ್ಧಾರದಿಂದಾಗಿ ಬಿಬಿಎಂಪಿಯಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಅನಿವಾರ್ಯವಾಗಿ ತಮ್ಮ ಮೈತ್ರಿಯನ್ನು ಮುಂದುವರಿಸುವ ಅಗತ್ಯತೆ ಎದುರಾಗಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ