Select Your Language

Notifications

webdunia
webdunia
webdunia
webdunia

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಗದ ಜಾಮೀನು: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಆಘಾತ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಗದ ಜಾಮೀನು: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಆಘಾತ

Sampriya

ಬೆಂಗಳೂರು , ಬುಧವಾರ, 26 ಜೂನ್ 2024 (18:40 IST)
ಬೆಂಗಳೂರು: ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಸಂಬಂಧ ಬಂಧಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಈ ಮೂಲಕ ಪ್ರಜ್ವಲ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.  

ಹೊಳೆನರಸೀಪುರ ಪೊಲೀಸ್​ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಪ್ರಜ್ವಲ್​ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದೆ.

ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್​ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶಿಸಿದ್ದಾರೆ. ಈ ಮೂಲಕ ಜಾಮೀನಿನ ನಿರೀಕ್ಷೆಯಲ್ಲಿದ್ದ ಪ್ರಜ್ವಲ್‌ ರೇವಣ್ಣಗೆ ದೊಡ್ಡ ಆಘಾತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ: ಜು.2ರೊಳಗೆ ರಾಹುಲ್‌ ಕೋರ್ಟ್‌ಗೆ ಹಾಜರಾಗುವಂತೆ ಆದೇಶ