ಲಾಂಗ್ ಗೌನ್ ಗೆ ನಾವು ಹೆದರಲ್ಲ ಪಾದಯಾತ್ರೆ ಮಾಡೇ ತೀರುತ್ತೇವೆ - ಡಿ. ಕೆ. ಶಿ

Webdunia
ಬುಧವಾರ, 5 ಜನವರಿ 2022 (14:48 IST)
ಕೋವಿಡ್ ಲಾಕ್ ಡೌನ್ ಅಲ್ಲ, ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ ಡೌನ್. ಇಲ್ಲಿ ಯಾವುದೇ ಟಫ್ ರೂಲ್ ಇಲ್ಲ. ಅವರ ರಾಜಕಾರಣ ಟಫ್ ಆಗಿದೆ, ಜನ ಅವರಿಗೆ ಟಫ್ ಆಗಿ ಉತ್ತರ ನೀಡುತ್ತಿದ್ದಾರೆ. ಅದಕ್ಕಾಗಿ ಈ ನಿರ್ಬಂಧ ಹೇರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿ
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ನೀಡಿದ ಪ್ರತಿಕ್ರಿಯೆಯಲ್ಲಿ ಅವರು ಒಂದೇ ದಿನ ಮೂರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಸರಕಾರ ಹೇಳುತ್ತಿದೆ. ರಾಜ್ಯದಲ್ಲಿ 6 ಕೋಟಿ ಜನ ಇದ್ದಾರೆ. ಸೋಂಕಿತರ ಸಂಖ್ಯೆ 2 ರಿಂದ 3 ಸಾವಿರಕ್ಕೆ ಏರಿದೆ ಎಂದು ಹೇಳುತ್ತಿದ್ದಾರೆ. ಆ ಸೋಂಕಿತರು ಎಲ್ಲಿದ್ದಾರೆ ಎಂದು ಪಟ್ಟಿ ಕೊಟ್ಟರೆ ನಾವು ಹೋಗಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ. ಅವರು ರಾಲಿ, ಪ್ರತಿಭಟನೆ ಮಾಡಬೇಡಿ ಎಂದಿದ್ದಾರೆ. ನಮ್ಮದು ನೀರಿಗಾಗಿ ನಡಿಗೆ‌. ವಾಕ್ ಫಾರ್ ದಿ ವಾಟರ್. ನಾವು ನೀರಿಗಾಗಿ ನಡೆಯುತ್ತೇವೆ ಅಷ್ಟೇ ಎಂದು ಹೇಳಿದ್ದಾರೆ.
 
ಜನರ ಹಿತಕ್ಕಾಗಿ, ಕುಡಿಯುವ ನೀರಿಗೆ, ಜನರ ಭಾವನೆ, ಧ್ವನಿಗಾಗಿ, ರೈತರ ರಕ್ಷಣೆಗಾಗಿ ಬೆಂಗಳೂರಿನ ನಾಗರಿಕರಿಗಾಗಿ ನಾವು ಮನವಿ ಮಾಡುತ್ತಿದ್ದೇವೆ. ನಮ್ಮದು ಹೋರಾಟವಲ್ಲ ಮನವಿ. ಸರ್ಕಾರ ನಿರ್ಬಂಧ ಎಂದು ನೋಟೀಸ್ ಜಾರಿ ಮಾಡಿದ್ದಾರೆ. ನಾವು ರಾಲಿ, ಧರಣಿ ಮಾಡುವುದಿಲ್ಲ. ನೀರಿಗಾಗಿ ನಡೆಯುತ್ತೇವೆ. ರಸ್ತೆಯಲ್ಲಿ ಯಾರೂ ನಡೆಯಬಾರದಾ? ಇಡೀ ರಾಜ್ಯದಲ್ಲಿ ರಸ್ತೆಯಲ್ಲಿ ಯಾರೂ ಓಡಾಡಬಾರದಾ? ಅದನ್ನು ತಡೆಯಲು ಹೇಗೆ ಸಾಧ್ಯ?ನನಗೆ ಒಂದು ವಿಚಾರದಲ್ಲಿ ಬಹಳ ಸಂಕಟವಾಗುತ್ತಿದೆ. ಈಗಾಗಲೇ ಜನ ಸಂಕಷ್ಟಕ್ಕೆ ಸಿಕ್ಕಿದ್ದಾರೆ. ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು, ಕಾರ್ಮಿಕರು ಒದ್ದಾಡುತ್ತಿದ್ದಾರೆ. ಅವರ ಮೇಲೆ ಅನಗತ್ಯವಾಗಿ ಮತ್ತೆ ಲಾಕ್ ಡೌನ್ ಹೇರುವುದು ಎಷ್ಟರ ಮಟ್ಟಿಗೆ ಸರಿ?ಎಂದು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments