Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಬದಲಾವಣೆ ಇಲ್ಲ : ಗೋಪಾಲಯ್ಯ

ಮುಖ್ಯಮಂತ್ರಿ ಬದಲಾವಣೆ ಇಲ್ಲ : ಗೋಪಾಲಯ್ಯ
ಹಾಸನ , ಶುಕ್ರವಾರ, 6 ಮೇ 2022 (12:43 IST)
ಹಾಸನ : ಮುಖ್ಯಮಂತ್ರಿ ಬದಲಾವಣೆಯಂಥ ವಿಚಾರವನ್ನು ಬೀದಿಲಿ ನಿತ್ಕೊಂಡು ಮಾತನಾಡಬಾರದು.

ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸಚಿವ ಗೋಪಾಲಯ್ಯ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ರಾಷ್ಟ್ರದಲ್ಲಿ ದೊಡ್ಡ ಪಕ್ಷವಾದ ಬಿಜೆಪಿಯಲ್ಲಿ ವರಿಷ್ಠರಿದ್ದಾರೆ, ವರಿಷ್ಠರು ಹೇಳಿದ ಮಾತಿಗೆ ಗೌರವ ಕೊಡಬೇಕಾಗುತ್ತದೆ ಎಂದರು. ಮುಂದಿನ ವರ್ಷದಲ್ಲಿ ಚುನಾವಣೆ ಇದೆ. ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಮುಂದಿನ ಚುನಾವಣೆಯ ನೇತೃತ್ವವನ್ನು ಬೊಮ್ಮಾಯಿ ಅವರೇ ವಹಿಸಿಕೊಳ್ಳುತ್ತಾರೆ.

ಬೊಮ್ಮಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಯತ್ನಾಳ್ ಅವರು ಪಕ್ಷದಲ್ಲಿ ಹಿರಿಯರಿದ್ದಾರೆ. ಏನೇ ಇದ್ದರು ಪಕ್ಷದ ವರಿಷ್ಠರು ಮಾತನಾಡಿ ಬಗೆಹರಿಸುತ್ತಾರೆ ಎಂದು ಹೇಳಿದರು.

ಯಾವುದೇ ಕಾರಣಕ್ಕೂ ಅಶ್ವಥ್ ನಾರಾಯಣ್ ಇದರಲ್ಲಿ ಭಾಗಿಯಾಗಿಲ್ಲ. ನಾವು ಅಶ್ವಥ್ ನಾರಾಯಣ್ ಅವರನ್ನು ನೋಡಿಯೇ ಇಲ್ಲ ಎಂದು ಆರೋಪಿ ಸ್ಥಾನದಲ್ಲಿರುವ ಹುಡಗನ ತಂದೆಯೇ ಹೇಳಿದ್ದಾರೆ. ಅಶ್ವಥ್ ನಾರಾಯಣ್ ಅವರನ್ನು ರಾಜಕೀಯವಾಗಿ ಬಲಿಪಶು ಮಾಡಬೇಕೆಂದು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ ಎಷ್ಟು?