Webdunia - Bharat's app for daily news and videos

Install App

ರೈತನಿಗಿಲ್ಲ ಪರಿಹಾರ: ಸರ್ಕಾರಿ ಕಚೇರಿ ಜಪ್ತಿಗೆ ಆದೇಶಿಸಿದ ನ್ಯಾಯಾಲಯ

Webdunia
ಮಂಗಳವಾರ, 28 ಏಪ್ರಿಲ್ 2015 (18:19 IST)
ಕೆರೆ ನಿರ್ಮಾಣಕ್ಕೆಂದು ರೈತರೋರ್ವರಿಂದ ಕೃಷಿ ಭೂಮಿಯನ್ನು ವಶಪಡಿಸಿಕೊಂಡು ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರದ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ಕಾರಣದಿಂದ ಇಲ್ಲಿನ ಜಿಲ್ಲಾ ಸತ್ರ ನ್ಯಾಯಾಲಯವು ನಗರದಲ್ಲಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್ ಕಚೇರಿಯನ್ನು ಜಪ್ತಿ ಮಾಡಿಕೊಳ್ಳಲು ಆದೇಶಿಸಿದೆ.   
 
ಪ್ರಕರಣದ ಹಿನ್ನೆಲೆ: ಇದು 2008ನೇ ಸಾಲಿನ ಪ್ರಕರಣವಾಗಿದ್ದು, 2 ಗ್ರಾಮಗಳಿಗೆ ಕುಡಿಯುವ ನೀರನ್ನು ಸರಬರಾಜು ಮಾಡಲೆಂದು ಇಲ್ಲಿನ ರೈತರೋರ್ವರಿಂದ 9 ಎಕರೆ 31 ಗುಂಟೆ ಭೂಮಿಯನ್ನು ಪಂಚಾಯತ್ ರಾಜ್ ಇಲಾಖೆ ವಶಪಡಿಸಿಕೊಂಡಿತ್ತು. 
 
ಆ ಖರೀದಿ ವೇಳೆಯಲ್ಲಿ ಒಂದು ಗುಂಟೆ ಭೂಮಿಗೆ 11025ರೂ ನೀಡಿ ಖರೀದಿಸಲಾಗಿತ್ತು. ಆದರೆ ಇದು ಸರ್ಕಾರಿ ಮೌಲ್ಯಕ್ಕಿಂತಲೂ ಕಡಿಮೆ ಇದ್ದು ನನಗೆ ನೀಡಿರುವ ಪರಿಹಾರ ಸೂಕ್ತವಲ್ಲ ಎಂದು ಸರ್ಕಾರದ ವಿರುದ್ಧ ಭೂಮಿ ನೀಡಿದ್ದ ರೈತ ಸೂಕ್ತ ಪರಿಹಾರ ಕೊಡಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಒಂದು ಗುಂಟೆಗೆ 21648 ರೂ. ಪರಿಹಾರ ನೀಡುವಂತೆ ಸೂಚಿಸಿ 2014ರ ಜನವರಿಯಲ್ಲಿ ಆದೇಶಿಸಿತ್ತು.  
 
ಹೀಗೆ ಒಟ್ಟು 1 ಕೋಟಿ 64 ಲಕ್ಷ ಪರಿಹಾರ ನೀಡಲು ತೀರ್ಪಿತ್ತಿತ್ತು. ಆದರೆ ಈ ಹಣವನ್ನು ಮತ್ತೊಂದು ಇಲಾಖೆ ನೀಡಲಿದೆ. ಇದು ನಮಗೆ ಸಂಬಂಧಿಸಿದ್ದಲ್ಲ. ಎಸಿ ಕಚೇರಿಗೆ ಸಂಬಂಧಿಸಿದ್ದಾಗಿದೆ ಎಂದು ಪಂಚಾಯತ್ ಇಲಾಖೆ ಅಧಿಕಾರಿಗಳು ಪರಿಹಾರ ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶಕ್ಕೆ ತಕ್ಕಂತೆ ನಡೆದುಕೊಳ್ಳದೆ, ಪರಿಹಾರವನ್ನೂ ನೀಡದೆ ಸತಾಯಿಸುತ್ತಿದ್ದು, ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದೇ ನಗರದಲ್ಲಿನ ಪಂಚಾಯತ್ ರಾಜ್ ಕಚೇರಿಯನ್ನು ಜಪ್ತಿ ಮಾಡಿಕೊಳ್ಳಿ ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ. 
 
ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಸಿಬ್ಬಂದಿಗಳು ಇಂದು ಇಲಾಖೆಯ ಕಟ್ಟಡಕ್ಕೆ ಮುತ್ತಿಗೆ ಹಾಕಿದ್ದು, ಸಂಪೂರ್ಣವಾಗಿ ಜಪ್ತಿ ಮಾಡಿಕೊಂಡಿದ್ದಾರೆ. ಈ ವೇಳೆ ಕೋರ್ಟ್ ಸಿಬ್ಬಂದಿ ಹಾಗೂ ಸರ್ಕಾರಿ ವಕೀಲರ ನಡುವೆ ಕೆಲ ಹೊತ್ತಿನ ವಾದ-ವಿವಾದಗಳು ನಡೆದವು. ಆದರೂ ಕಚೇರಿಯನ್ನು ಜಪ್ತಿ ಮಾಡುವಲ್ಲಿ ನ್ಯಾಯಾಲಯದ ಸಿಬ್ಬಂದಿ ಯಶಸ್ವಿಯಾದರು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments