Select Your Language

Notifications

webdunia
webdunia
webdunia
webdunia

ಕಾವೇರಿ ಒಕ್ಕೊರಲು ನಿರ್ಣಯಕ್ಕೆ ಸಂವಿಧಾನ ಬಿಕ್ಕಟ್ಟು ಎದುರಾಗುವುದಿಲ್ಲ: ಟಿ.ಬಿ.ಜಯಚಂದ್ರ

ಕಾವೇರಿ ಒಕ್ಕೊರಲು ನಿರ್ಣಯಕ್ಕೆ ಸಂವಿಧಾನ ಬಿಕ್ಕಟ್ಟು ಎದುರಾಗುವುದಿಲ್ಲ: ಟಿ.ಬಿ.ಜಯಚಂದ್ರ
ದೊಡ್ಡಬಳ್ಳಾಪುರ , ಭಾನುವಾರ, 25 ಸೆಪ್ಟಂಬರ್ 2016 (14:15 IST)
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಅಂಗೀಕರಿಸಿರುವ ನಿರ್ಣಯದಿಂದ ಯಾವುದೇ ರೀತಿಯ ಸಂವಿಧಾನಿಕ ಬಿಕ್ಕಟ್ಟು ಉಂಟಾಗುವುದಿಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯ ಪಟ್ಟಿದ್ದಾರೆ. 
 
ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್ ಇಂಟರ್‌ನ್ಯಾಶನಲ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬಾರದೆಂದು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ. ಈ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳತ್ತೇವೆ ಎಂದು ಹೇಳಿದರು.
 
ಸೆಪ್ಟೆಂಬರ್ 27ರಂದು ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ವಿಚಾರಣೆ ನಡೆಯಲಿದ್ದು, ರಾಜ್ಯದ ನೀರಿನ ಸಮಸ್ಯೆ ಹಾಗೂ ಶಾಸನ ಸಭೆಯಲ್ಲಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡದಂತೆ ಅಂಗೀಕರಿಸಿರುವ ನಿರ್ಣಯ ಪತ್ರವನ್ನು ನೀಡಲಿದ್ದೇವೆ. ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿರುವ ಕುರಿತು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯಿಲ್ಲ: ಆರ್.ಅಶೋಕ್ ಪರೋಕ್ಷ ನುಡಿ