Publish Date: Mon, 15 Dec 2025 (16:57 IST)
Updated Date: Mon, 15 Dec 2025 (17:03 IST)
ಬೆಂಗಳೂರು: ರೈತರ ನೋವಿಗೆ ರಾಜ್ಯ ಸರ್ಕಾರ ಸಕಾಲದಲ್ಲಿ ಸ್ಪಂದಿಸಿದ್ದು, ತ್ವರಿತಗತಿಯಲ್ಲಿ ಪರಿಹಾರ ಬಿಡುಗಡೆ ಮಾಡಿದೆ. ಸಮರೋಪಾಧಿಯಲ್ಲಿ ಕ್ರಮ ಕೈಗೊಂಡು ಅತಿವೃಷ್ಠಿಯಿಂದಾಗಿ ಸಂಕಷ್ಟದಲ್ಲಿದ್ದ ಕಲಬುರಗಿ ಜಿಲ್ಲೆಯ ಅನ್ನದಾತರ ಬದುಕಿಗೆ ಆಸರೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ನಡೆಸಿದ ಜಂಟಿ ಸಮೀಕ್ಷೆ ವರದಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 3.24 ಲಕ್ಷ ಹೆಕ್ಟೇರ್ ಜಮೀನು ಹಾನಿಗೊಳಗಾಗಿತ್ತು.
- ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 3,32,318 ರೈತರು ಬೆಳೆಹಾನಿ ಪರಿಹಾರಕ್ಕೆ ಅರ್ಹತೆ ಪಡೆದಿದ್ದಾರೆ.
- ಎಸ್‌ಡಿಆರ್‌ಎಫ್ ನಿಯಮಗಳಡಿ ₹25,097.21 ಲಕ್ಷ ಪರಿಹಾರ ದೊರಕಿದೆ.
- ರಾಜ್ಯ ಸರ್ಕಾರದ ಹೆಚ್ಚುವರಿ ಇನ್‌ಪುಟ್ ಸಬ್ಸಿಡಿ ಘೋಷಣೆಯಡಿ ₹24,775.85 ಲಕ್ಷ ವಿತರಿಸಲಾಗಿದೆ.
- ಕಲಬುರಗಿ ಜಿಲ್ಲೆಗೆ ಈಗಾಗಲೇ ಒಟ್ಟು 49,873.03 ಲಕ್ಷ ಪರಿಹಾರ ನೀಡಲಾಗಿದೆ.
ವಿವಿಧ ತಾಂತ್ರಿಕ ಕಾರಣಗಳಿಂದ ಸುಮಾರು 9,964 ರೈತರು ಪರಿಹಾರದ ಲಾಭ ಪಡೆಯುವಲ್ಲಿ ವಿಫಲರಾಗಿದ್ದಾರೆ. ಪರಿಹಾರ ಪಡೆಯುವಲ್ಲಿ ವಿಫಲರಾದ ರೈತರಿಗೆ ಸಮಸ್ಯೆ ಪರಿಹರಿಸಿಕೊಳ್ಳಲು ಅಗತ್ಯ ತಾಂತ್ರಿಕ ನೆರವನ್ನು ನೀಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ವಂಚಿತ ರೈತರು ಕೂಡಲೇ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ವಿನಂತಿಸುತ್ತೇನೆ.
#ಕಲಬುರಗಿಕಲ್ಯಾಣ