Select Your Language

Notifications

webdunia
webdunia
webdunia
webdunia

ಡಿನೋಟಿಫಿಕೇಶನ್ ಮಾಡೇ ಇಲ್ಲ, ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ: ಸಿಎಂ

ಡಿನೋಟಿಫಿಕೇಶನ್ ಮಾಡೇ ಇಲ್ಲ, ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ: ಸಿಎಂ
ಬೆಂಗಳೂರು , ಮಂಗಳವಾರ, 10 ಅಕ್ಟೋಬರ್ 2017 (14:24 IST)
ನಾನು ಯಾವತ್ತೂ ಡಿನೋಟಿಫಿಕೇಶನ್ ಮಾಡಿಯೇ ಇಲ್ಲ. ಅಂದ ಮೇಲೆ ನನ್ನ ವಿರುದ್ಧ ಡಿನೋಟಿಫಿಕೇಶನ್ ಆರೋಪ ಎಲ್ಲಿಂದ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಓಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ ಬಿ.ಜಿ.ಪುಟ್ಟಸ್ವಾಮಿ ನನ್ನ ವಿರುದ್ಧ ಡಿನೋಟಿಫಿಕೇಶನ್ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಪುಟ್ಟಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಹಿರಿಯ ವಕೀಲರೊಂದಿಗೆ ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.
 
ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಇಲ್ಲ ಸಲ್ಲದ ಆರೋಪ ಮಾಡಿ ನನ್ನ ಹೆಸರು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಐಟಿ ಅಧಿಕಾರಿಗಳ ಮೇಲೆ ದಾಳಿ ವರದಿಯಲ್ಲಿ ಸತ್ಯಾಂಶವಿಲ್ಲ: ಆರ್.ಕೆ.ದತ್ತಾ