ಆರೋಪಗಳಿಗೆ ದಾಖಲೆ ಒದಗಿಸಲ್ಲ-ಮಾಜಿ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 15 ಫೆಬ್ರವರಿ 2023 (19:56 IST)
ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಮೇಲೆ ಐಟಿ ದಾಳಿ ಹಿನ್ನೆಲೆ, ಹುಬ್ಬಳ್ಳಿ ತಾಲೂಕಿನ ಹೆಬಸೂರಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರಭಾಕರ್ ರೆಡ್ಡಿ ಒಬ್ಬ ಉದ್ಯಮಿ ಇದ್ದಾರೆ, ಇಂತಹ ಐಟಿ ದಾಳಿ ಸಾಮಾನ್ಯ. ಅದು ಯಾಕೆ ಅಂತ ಎಲ್ಲರಿಗೂ ಗೊತ್ತು. ಇನ್ನೂ ಎರಡು-ಮೂರು ತಿಂಗಳು ಇಂತಹ ಐಟಿ ದಾಳಿಗಳು ವಿರೋಧ ಪಕ್ಷಗಳ ಮೇಲೆ ನಡೆಯುತ್ತವೆ. ಇದು ಯಾಕೆ ಅಂತ ಎಲ್ಲರಿಗೂ ಗೊತ್ತು, ಈ ಬಗ್ಗೆ ಜಾಸ್ತಿ ಮಾತನಾಡುವ ಅವಶ್ಯಕತೆಯಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಭ್ರಷ್ಟಾಚಾರದ ಬಗ್ಗೆ ವಿಧಾನಸಭಾ ಕಲಾಪದಲ್ಲಿ ಚರ್ಚೆ ಮಾಡುವುದು ತೌಡು ಕುಟ್ಟುವ ಕೆಲಸದಂತೆ, ಕೇವಲ ಚರ್ಚೆಯಿಂದ ಏನೂ ಸಾಧ್ಯವಿಲ್ಲ. ಎಲ್ಲಾ ಭ್ರಷ್ಟಾಚಾರ ಆರೋಪಗಳಿಗೆ ದಾಖಲೆ ಒದಗಿಸಲು ಸಾಧ್ಯವಿಲ್ಲ’ ಎಂದು ಹೆಚ್​ಡಿಕೆ ತಮ್ಮ ಪಕ್ಷದ ಮುಖಂಡನನ್ನ ಸಮರ್ಥಿಸಿಕೊಂಡರು. ಬಿಜೆಪಿ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಹೆಚ್​ಡಿಕೆ, ‘ಕಾಂಗ್ರೆಸ್​ನ ಈ ಆರೋಪ ಭೂತದ ಬಾಯಿಯಲ್ಲಿ ಭಗವದ್ಗೀತೆ ಕೇಳಿದಂತೆ, ಬಿಜೆಪಿಯವರು ಅವರ ಆತ್ಮಸಾಕ್ಷಿಗೆ ಉತ್ತರ ಕೊಡಬೇಕು. ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಸಾಮಾನ್ಯ, ಇದಕ್ಕೆ ದಾಖಲೆ ನೀಡಲ್ಲ. ನಾನು ಈ ಹಿಂದೆ ಭ್ರಷ್ಟಾಚಾರದ ಆರೋಪಗಳಿಗೆ ದಾಖಲೆ ನೀಡಿದ್ದೆ, ಆದರೆ ಆ ದಾಖಲೆಗಳಿಂದ ಕಾಂಗ್ರೆಸ್ ಅನುಕೂಲ ಮಾಡಿಕೊಂಡಿತು. ಕಾಂಗ್ರೆಸ್ ನಂಬಿದ್ರೆ ಅಕ್ಕಿನೂ ಸಿಗಲ್ಲ’ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

ಮುಂದಿನ ಸುದ್ದಿ
Show comments