Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಅನುಮಾನವಿಲ್ಲ: ವಿಜಯೇಂದ್ರ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಅನುಮಾನವಿಲ್ಲ: ವಿಜಯೇಂದ್ರ

Sampriya

ಬೆಂಗಳೂರು , ಭಾನುವಾರ, 4 ಆಗಸ್ಟ್ 2024 (12:03 IST)
Photo Courtesy X
ಬೆಂಗಳೂರು: ನಮ್ಮದು ವಿರೋಧ ಪಕ್ಷ. ರಾಜ್ಯದ ಜನರ ಪರವಾಗಿ ನಾವು ಕೇಳುವ ಪ್ರಶ್ನೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಉತ್ತರ ನೀಡಬೇಕು. ಅದರ ಬದಲಾಗಿ ನಮಗೇ ಪ್ರಶ್ನೆ ಹಾಕುತ್ತಿದ್ದು, ಇದು ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.

ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸದನದಲ್ಲೂ ನಮ್ಮ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಇವತ್ತೂ ಉತ್ತರ ಸಿಕ್ಕಿಲ್ಲ. ಈ ಪಾದಯಾತ್ರೆ ಮೂಲಕ ಇವರಿಗೆ ಚಾಟಿ ಬೀಸುವ ಮತ್ತು ಬುದ್ಧಿ ಕಲಿಸುವ ಕೆಲಸ ಮಾಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನಗಳು ಹತ್ತಿರ ಆಗುತ್ತಿವೆಯೇ ಎಂಬ ಪ್ರಶ್ನೆಗೆ 'ನನಗೇನೂ ಇದರಲ್ಲಿ ಅನುಮಾನ ಇಲ್ಲ' ಎಂದು ಉತ್ತರಿಸಿದರು. ಸಿದ್ದರಾಮಯ್ಯನವರು ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳು; ತಮ್ಮ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕಿ ಇಲ್ಲ ಎಂದು ಮೊಂಡುವಾದ ಮಾಡುತ್ತಿದ್ದರು. ಇವತ್ತು ಅವರು ಹಗರಣಗಳ ಸರಮಾಲೆಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ನಿನ್ನೆ ಯಾದಗಿರಿಯಲ್ಲಿ ಪಿಎಸ್‌ಐ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಹಿಂದಿನ ಕಾರಣ ರಾಜ್ಯದ ಜನತೆಗೆ ಗೊತ್ತಿದೆ. ರಾಜ್ಯದ ಆಡಳಿತ ಪಕ್ಷದ ಪರಿಸ್ಥಿತಿ ಹಿರಿಯಕ್ಕನ ಚಾಳಿ ಮನೆಮಂದಿಗೆ ಎಂಬತಾಗಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ; ಸ್ವತಃ ಮಂತ್ರಿಮಂಡಲ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅದೇರೀತಿ ಆಡಳಿತ ಪಕ್ಷದ ಶಾಸಕರೂ ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಆಕ್ಷೇಪಿಸಿದರು.

ಕರ್ನಾಟಕದಲ್ಲಿ ಸರಕಾರಿ ಅಧಿಕಾರಿಗಳು, ಗುತ್ತಿಗೆ ಹಣ ಸಿಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶಾಸಕರು ಕೇಳಿದ ಲಂಚ ಕೊಡಲಾಗದೆ ಪಿಎಸ್‌ಐ ಪರಶುರಾಮ್ ನಿನ್ನೆ ಸಾವನ್ನಪ್ಪಿದ್ದಾರೆ. ಭ್ರಷ್ಟಾಚಾರರಹಿತ ಆಡಳಿತ ಕೊಡುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಇಂದು ಹಗರಣಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ಟೀಕಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಾದ್ಯಂತ ವರುಣನ ಅಬ್ಬರ: ರಾಜಧಾನಿಯಲ್ಲಿ ಸಾಧಾರಣ ಮಳೆ ಸಾಧ್ಯತೆ