ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ 9ರವೆರೆಗೆ ವಾಹನ ಸಂಚಾರಕ್ಕೆ ಅವಕಾಶ ಇದ್ದು, ನಂತರ ಕೇರಳದಿಂದ ಎರಡು ಬಸ್ ಹಾಗೂ ಆಂಬುಲೆನ್ಸ್‌ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವಿಧಾನನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ದಿನದ 24 ಗಂಟೆಯೂ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ಕೆಲ ಕಾಂಗ್ರೆಸ್ ನಾಯಕರ ಸಲಹೆಗೆ ಪ್ರತಿಕ್ರಿಯಿಸಿ, ಬಂಡೀಪುರದಲ್ಲಿ ರಾತ್ರಿ 9 ಗಂಟೆ ನಂತರ ವಾಹನಗಳ ಸಂಚಾರಕ್ಕೆ ನಿಷೇಧ ಇದೆ. ಆದರೆ ಎರಡು ಬಸ್‌ಗಳು ಮತ್ತು ಆ್ಯಂಬುಲೆನ್ಸ್ ಸಂಚಾರಕ್ಕೆ ಅವಕಾಶ ಒದಗಿಸಲಾಗಿದೆ.
ಈ ವಿಚಾರದ ಬಗ್ಗೆ ಪಕ್ಷದ ನಾಯಕರಿಗೆ ಮನದಟ್ಟು ಮಾಡಲಾಗುವುದು. ವನ್ಯಜೀವಿಗಳ ರಕ್ಷಣೆ ಜತೆಗೆ ಅಂತರ್ ರಾಜ್ಯಗಳ ಸಂಬಂಧವೂ ಮುಂದುವರಿಯುವಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ವನ್ಯಜೀವಿ ಸಂರಕ್ಷಣೆಯೂ ಜತೆಗೆ ಅಂತರರಾಜ್ಯ ಸಂಬಂಧವೂ ಮುಂದುವರೆಯಬೇಕು ಎಂದು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.