Webdunia - Bharat's app for daily news and videos

Install App

ದ್ವಿತೀಯ ಪಿಯು ಪರೀಕ್ಷೆ ರದ್ದು; ಎಸ್ಎಸ್ಎಲ್ ಸಿಗೆ ಎರಡು ಪರೀಕ್ಷೆ

Webdunia
ಶುಕ್ರವಾರ, 4 ಜೂನ್ 2021 (10:26 IST)
ಬೆಂಗಳೂರು: ಕೊರೋನಾ ಅಲೆ ಹೆಚ್ಚಿರುವ ಹಿನ್ನಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿದ್ದು, ಎಸ್ಎಸ್ಎಲ್ ಸಿ ಪರೀಕ್ಷೆ ಎರಡು ಹಂತಗಳಲ್ಲಿ ನಡೆಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ


ಪ್ರಥಮ ಪಿಯು ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು. ಸದ್ಯಕ್ಕೆ ಎಲ್ಲಾ ದ್ವಿತೀಯ ಪಿಯು ವಿದ್ಯಾರ್ಥಿಗಳು ಪಾಸ್. ಒಂದು ವೇಳೆ ತೇರ್ಗಡೆ ವಿಚಾರದಲ್ಲಿ ಅಸಮಾಧಾನವಿದ್ದರೆ ಅವರಿಗೆ ಕೊರೋನಾ ಕಡಿಮೆಯಾದ ಮೇಲೆ ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇನ್ನು, ಎಸ್ ಎಸ್ಎಲ್ ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮೂರೂ ಸೇರಿ ಒಂದು ಪರೀಕ್ಷೆ ನಡೆಸಲಿದ್ದೇವೆ. ಬಹುಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ ತಯಾರಿಸಿ ಪರೀಕ್ಷೆ ನಡೆಸಲಾಗುತ್ತದೆ. ಎರಡು ಪರೀಕ್ಷೆ ನಡೆಯಲಿದ್ದು, ಐಚ್ಛಿಕ ಭಾಷೆಗಳಿಗೆ ಒಂದೇ ಪೇಪರ್ ನಲ್ಲಿ ಪರೀಕ್ಷೆ ನಡೆಯಲಿದೆ.  ಗ್ರೇಡಿಂಗ್ ಮಾದರಿಯಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ನೀಡಲಾಗುತ್ತದೆ. ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದೆ. ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಯನ್ನು ಕೂರಿಸಲಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳಿಗೂ ಮಾಸ್ಕ್ ನೀಡಲಾಗುತ್ತದೆ. ಕೊರೋನಾ ಸೋಂಕಿತರಾಗಿದ್ದರೆ, ಮತ್ತೆ ಪರೀಕ್ಷೆ ಬರೆಯಲು ಅವಕಾಶವಿದೆ. ಈ ಬಾರಿ ಯಾರನ್ನೂ ಫೇಲ್ ಮಾಡಲಾಗುವುದಿಲ್ಲ ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments