Select Your Language

Notifications

webdunia
webdunia
webdunia
webdunia

ದಸರಾವರೆಗೆ ಜನ ಸೇರಲು ಅವಕಾಶವಿಲ್ಲ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ

ದಸರಾವರೆಗೆ ಜನ ಸೇರಲು ಅವಕಾಶವಿಲ್ಲ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ
mangalore , ಬುಧವಾರ, 11 ಆಗಸ್ಟ್ 2021 (18:46 IST)
ಈಗಾಗಲೇ ಮುಖ್ಯಮಂತ್ರಿಯವರು ಶಾಲೆ ಕಾಲೇಜು ರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಉಳಿದ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಆರಂಭವಾದರೂ ದ.ಕ.  ಸೇರಿದಂತೆ  ಕೋವಿಡ್ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ದ.ಕ. ಜಿಲ್ಲಾಸ್ಪತ್ರೆಯಾದ ವೆನ್‌ಲಾಕ್‌ನಲ್ಲಿ 32 ಬೆಡ್‌ಗಳ ಹೈಟೆಕ್ ಐಸಿಯು ಸಿದ್ಧಗೊಂಡಿದ್ದು, ಜಿಲ್ಲೆಗೆ ಗುರುವಾರ ಭೇಟಿ ನೀಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಲಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.
ಆ.15ರಿಂದ ಮತ್ತೆ ಲಾಕ್‌ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವುದು ನಿಜ. ಆದರೆ ಅತ್ಯಂತ ಸುಸಜ್ಜಿತ ಆಧುನಿಕ ಆಸ್ಪತ್ರೆಗಳು, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಕಾಸರಗೋಡು ಸೇರಿದಂತೆ ಕೇರಳ ರಾಜ್ಯದ ಜತೆ ದ.ಕ. ಜಿಲ್ಲೆ ಗಡಿ ಹಂಚಿಕೊಂಡಿರುವುದರಿಂದ ಸಹಜವಾಗಿ ಪಾಸಿಟಿವಿಟಿ ದರದಲ್ಲಿ ಹೆಚ್ಚಳ ಕಂಡುಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಪ್ರತಿನಿತ್ಯ ಕೋವಿಡ್ ತಪಾಸಣಾ ಸಂಖ್ಯೆಯೂ ಹೆಚ್ಚುತ್ತಿದೆ.
ನಿನ್ನೆ ಒಂದು ದಿನದಲ್ಲಿ 9900 ಮಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ  ಮತ್ತೆ ಲಾಕ್‌ಡೌನ್ ಮಾಡುವಂತಹ ಪರಿಸ್ಥಿತಿ ಇಲ್ಲ. ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರಕಾರದ ನಿರ್ದೇಶನದ ಮೇರೆಗೆ ಕ್ರಮ ವಹಿಸಲಾಗುತ್ತದೆ ಎಂದು ಆ. 15ರ ಬಳಿಕ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಊಹಾಪೋಹಗಳ ಕುರಿತಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರತಿಕ್ರಿಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ 3 ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆ!