ದೆಹಲಿಯಲ್ಲಿ ಬೀಡುಬಿಟ್ಟರೂ ಡಿಕೆ ಶಿವಕುಮಾರ್ ಕೈಗೆ ಸಿಗದೇ ತಪ್ಪಿಸಿಕೊಂಡ್ರಾ ಹೈಕಮಾಂಡ್ ನಾಯಕರು

Krishnaveni K
ಮಂಗಳವಾರ, 28 ಅಕ್ಟೋಬರ್ 2025 (09:37 IST)
ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ  ವಿಚಾರವಾಗಿ ಚರ್ಚೆ ನಡೆಯುತ್ತಿರುವಾಗ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿಗೆ ಡಿಕೆ ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ. ಆದರೆ ಡಿಕೆಶಿ ಕೈಗೆ ಸಿಗದೇ ಹೈಕಮಾಂಡ್ ನಾಯಕರು ತಪ್ಪಿಸಿಕೊಳ್ಳುತ್ತಿದ್ದಾರಾ ಎಂದು ಅನುಮಾನ ಮೂಡುತ್ತಿದೆ.

ದೆಹಲಿಗೆ ಹೋಗಿರುವ ಡಿಕೆ ಶಿವಕುಮಾರ್ ಸಾಧ್ಯವಾದರೆ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಮುಂತಾದ ನಾಯಕರನ್ನು ಭೇಟಿ ಮಾಡಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ಆದರೆ ಈ ಇಬ್ಬರೂ ನಾಯಕರು ಡಿಕೆಶಿಗೆ ಸಿಕ್ಕಿಲ್ಲ.

ಸದ್ಯಕ್ಕೆ ಬಿಹಾರದಲ್ಲಿ ಚುನಾವಣೆ ನಡೆಯಲಿದ್ದು, ಅದರ ಬಳಿಕವೇ ಕರ್ನಾಟಕದ ಬಗ್ಗೆ ತೀರ್ಮಾನ ತೆಗೆದುಕೊಳ್ಳೋಣ ಎಂಬ ನಿಲುವು ಹೈಕಮಾಂಡ್ ನಾಯಕರಲ್ಲಿದೆ ಎನ್ನಲಾಗಿದೆ. ಈ ಕಾರಣಕ್ಕೆ ಅದಕ್ಕಿಂತ ಮೊದಲು ಈ ವಿಚಾರವಾಗಿ ಕರ್ನಾಟಕದ ನಾಯಕರೊಂದಿಗೆ ಯಾವುದೇ ಚರ್ಚೆ ನಡೆಸದೇ ಮೌನಕ್ಕೆ ಶರಣಾಗುವ ತಂತ್ರ ಹೆಣೆದಿದ್ದಾರೆ.

ಇದೇ ಕಾರಣಕ್ಕೆ ಡಿಕೆ ಶಿವಕುಮಾರ್ ರನ್ನು ಭೇಟಿ ಮಾಡಲು ಅವಕಾಶ ನೀಡಿಲ್ಲದಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇನ್ನೊಂದೆಡೆ ಸಿಎಂ ಬದಲಾವಣೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ‘ಸಿಎಂ ಹೇಳಿದ ಮೇಲೆ ಮುಗಿಯಿತು. ಅವರು ಹೇಗೆ ಹೇಳುತ್ತಾರೋ ಹಾಗೆ ನಡೆದುಕೊಳ್ಳುತ್ತೇವೆ’ ಎಂದಿದ್ದಾರೆ. ಆದರೂ ಡಿಕೆಶಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಮಾತ್ರ ಇಂದು ಭಾರೀ ಮಳೆ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments