Select Your Language

Notifications

webdunia
webdunia
webdunia
webdunia

ಹಿಜಾಬ್ ಧರಿಸುವಂತಿಲ್ಲ ಹೈಕೋರ್ಟ್ ಆದೇಶ

ಹಿಜಾಬ್ ಧರಿಸುವಂತಿಲ್ಲ ಹೈಕೋರ್ಟ್ ಆದೇಶ
ಬೆಂಗಳೂರು , ಮಂಗಳವಾರ, 15 ಮಾರ್ಚ್ 2022 (15:33 IST)
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಇಸ್ಲಾಂ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾ ಮಾಡಲಾಗಿದೆ.
ಶಾಲಾ-ಕಾಲೇಜುಗಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಬೇಕು. ಸರ್ಕಾರದ ವಸ್ತ್ರ ಸಂಹಿತೆ ನೀತಿಯನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ಪೂರ್ಣ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ.
 
ಶಾಲಾ-ಕಾಲೇಜುಗಳ ವಸ್ತ್ರ ಸಂಹಿತೆಯನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಸರ್ಕಾರದ ಸಮವಸ್ತ್ರ ಸಂಹಿತೆ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್​ ಹೇಳಿದೆ. ನ್ಯಾಯಪೀಠವು 8 ನಿಮಿಷದಲ್ಲಿ ತೀರ್ಪು ಓದಿ‌ ಮುಗಿಸಿತು.
 
ಕಾಲೇಜುಗಳಲ್ಲಿ ಹಿಜಾಬ್​ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಎಸ್​. ದೀಕ್ಷಿತ್​ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್​ ಅವರಿದ್ದ ಪೂರ್ಣಪೀಠ ಫೆ.25ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸುವ ಮೂಲಕ ಹಿಜಾಬ್​ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: ಬೊಮ್ಮಾಯಿ