Publish Date: Mon, 13 Feb 2023 (17:32 IST)
Updated Date: Mon, 13 Feb 2023 (17:44 IST)
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರ ಏರಿಕೆ ಮಾಡುವುದಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಜ್ಯದ ಜನರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಕೊಟ್ಟಿದ್ದಾರೆ.
ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ನಾಗರಾಜ್ ಯಾದವ್ ವಿಷಯ ಪ್ರಸ್ತಾಪ ಮಾಡಿದ್ರು. ಸರ್ಕಾರ ಜನರಿಗೆ ವಿದ್ಯುತ್ ಬರೆ ಹಾಕಲು ಹೊರಟಿದೆ. ಮಾಧ್ಯಮಗಳಲ್ಲಿ ವಿದ್ಯುತ್ ದರ ಏರಿಕೆ ಅಂತ ಸುದ್ದಿ ಬರುತ್ತಿದೆ.
ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡದಂತೆ ಒತ್ತಾಯ ಮಾಡಿದರು. ಇದಕ್ಕೆ ಉತ್ತರ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್, ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಇಲ್ಲ.