ಬೆಂಗಳೂರಿಗರೇ ಈ ಸುದ್ದಿಯನ್ನು ಓದಲೇ ಬೇಕು, ಇನ್ನೂ ಮೂರು ದಿನ ಕಾವೇರಿ ನೀರು ಬರಲ್ಲ

Sampriya
ಭಾನುವಾರ, 14 ಸೆಪ್ಟಂಬರ್ 2025 (12:45 IST)
ಬೆಂಗಳೂರು: ಇದೇ 15, 16 ಹಾಗೂ 17ರಂದು ಕಾವೇರಿ  ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ. 

ಬೆಂಗಳೂರಿನ ಜೀವನಾಡಿಯಾಗಿರುವ ಕಾವೇರಿ ನೀರು ಸರಬರಾಜಿನಲ್ಲಿ ಕಾಮಗಾರಿ ಹಿನ್ನೆಲೆ ಮೂರು ದಿನ ನೀರು ಬರುವುದಿಲ್ಲ. ಈ ಹಿನ್ನೆಲೆ ಇಂದೇ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿ ಸಾರ್ವಜನಿಕರಲ್ಲಿ ಮನವಿಯನ್ನು ಮಾಡಿದೆ. ಈ ಕುರಿತು ಜಲಮಂಡಳಿ ಅಧಿಕೃತ ಮಾಹಿತಿ ನೀಡಿದೆ. 

ಮನವಿಯಲ್ಲಿ ಹೀಗಿದೆ: 3 ದಿನ ಮನೆಗಳಿಗೆ ಕಾವೇರಿ ನೀರು ಬರಲ್ಲ. ನಾಳೆ, ನಾಡಿದ್ದು ಹಾಗೂ ಸೆಪ್ಟೆಂಬರ್ 17ರಂದು ಮನೆಗಳಿಗೆ ಕಾವೇರಿ ನೀರು ಬರಲ್ಲ. ತುರ್ತುಕಾಮಾಗಾರಿ ಹಿನ್ನೆಲೆ ಜಲರೇಚಕ ಯಂತ್ರಗಳ ಸ್ಥಗಿತ ಹಿನ್ನೆಲೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಒಟ್ಟು 60 ಗಂಟೆ ನಿಮ್ಮ ಮನೆಗೆ ಕಾವೇರಿ ನೀರು ಬರೋದಿಲ್ಲ. ಅಗತ್ಯ ನೀರು ಸಂಗ್ರಹಕ್ಕೆ ಸೂಚನೆ
ಮುಂಜಾಗ್ರತೆಯಾಗಿ ಅಗತ್ಯ ನೀರು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಸೂಚನೆ ನೀಡಿದೆ. 

ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನ ಖಚಿತಪಡಿಸಿಕೊಳ್ಳಲು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿ ನಡೆಸ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments