Publish Date: Sun, 07 Jun 2026 (13:12 IST)
Updated Date: Sun, 07 Jun 2026 (13:16 IST)
ಬೆಂಗಳೂರು: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮಾತ್ರ ಮುಖ್ಯಮಂತ್ರಿಯಲ್ಲ, ನಿಮ್ಮ ಮನೆ ಮಗ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಸಿಎಂ ಆದ ಬಳಿಕ ಮೊದಲ ಬಾರಿಗೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿ ಸ್ವಾಗತ ಕೋರಿದರು.
ಕಗ್ಗಲಿಪುರಕ್ಕೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕರ್ತರು ಪಟಾಕಿ ಸಿಡಿಸಿ ಭರ್ಜರಿ ಸ್ವಾಗತ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಪ್ರತಿ ಸಂದರ್ಭದಲ್ಲೂ ನೀವು ನನ್ನನ್ನು ಪ್ರೀತಿಯಿಂದ ಕಂಡಿದ್ದೀರಿ. ನನಗಾಗಿ ಹೋರಾಟ ಮಾಡಿದ್ದೀರಿ, ಪ್ರಾರ್ಥನೆ ಮಾಡಿದ್ದೀರಿ. ನಿಮಗೆಲ್ಲ ಶುಭವಾಗಲಿ. ನಿಮ್ಮ ಶಾಸಕ ಸೋಮಶೇಖರ್ ನನ್ನ ಜೊತೆ ಇದ್ದಾರೆ. ನಾನು ಕೂಡ ನಿಮ್ಮ ಜೊತೆ ಇರುತ್ತೇನೆ. ನಿಮ್ಮ ಸಮಸ್ಯೆ ಬಗೆಹರಿಸಲು ಯಾವಾಗಲು ಸಿದ್ಧನಾಗಿದ್ದೇನೆಂದು ಅವರು ಹೇಳಿದರು.
ಹಾರೋಹಳ್ಳಿ ಸರ್ಕಲ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಬ್ಯಾನರ್‌ಗಳು, ಕಟೌಟ್‌ಗಳು ಹಾಗೂ ಕಾಂಗ್ರೆಸ್ ಬಾವುಟಗಳಿಂದ ಪಟ್ಟಣ ಸಿಂಗಾರಗೊಂಡಿತ್ತು. ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಜಮಾಯಿಸಿದ್ದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ