Publish Date: Sat, 09 Apr 2022 (14:26 IST)
Updated Date: Sat, 09 Apr 2022 (14:27 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ , ಬೆಂಗಳೂರು ನಗರದಲ್ಲಿ ಏಪ್ರಿಲ್ 10 ರಂದು ಶ್ರೀರಾಮ ನವಮಿ ಪ್ರಯುಕ್ತ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ.
ಶ್ರೀರಾಮ ನವಮಿಯಂದು ಕಸಾಯಿಖಾನೆ, ಪ್ರಾಣಿ ವಧೆ, ಮಾಂಸ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರ ಸುತ್ತೋಲೆ ಹೊರಡಿಸಿದ್ದಾರೆ.
ಮುಖ್ಯ ಆಯುಕ್ತರ ಸುತ್ತೋಲೆ ಆಧರಿಸಿ ಬಿಬಿಎಂಪಿ ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಪ್ರತಿ ವರ್ಷ ಶ್ರೀರಾಮ ನವಮಿಯಂದು, ಗಾಂಧಿ ಜಯಂತಿ, ಸರ್ವೋದಯ ದಿನ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳಂದು ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆ ನಿಷೇಧವಿದೆ ಎಂದು ಬಿಬಿಎಂಪಿ ಅಧಿಕಾರಿ ಇದೇ ವೇಳೆ ತಿಳಿಸಿದ್ದಾರೆ.