Select Your Language

Notifications

webdunia
webdunia
webdunia
webdunia

ಬರ ಪರಿಹಾರಕ್ಕೆ ಕೇಂದ್ರದಿಂದ ನಯಾಪೈಸೆ ಬಂದಿಲ್ಲ-ಸಿದ್ದು

ಬರ ಪರಿಹಾರಕ್ಕೆ ಕೇಂದ್ರದಿಂದ ನಯಾಪೈಸೆ ಬಂದಿಲ್ಲ-ಸಿದ್ದು
bangalore , ಶನಿವಾರ, 28 ಅಕ್ಟೋಬರ್ 2023 (17:00 IST)
ಬೆಂಗಳೂರಿನ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇವತ್ತು ವಾಲ್ಮೀಕಿ ಜಯಂತಿಯ ಶುಭ ಸಂದರ್ಭದಲ್ಲಿ 8 ಜನ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದೇವೆ. ಎಲ್ಲರೂ ಕೂಡ ಅವರಂತೆ ಜೀವನದಲ್ಲಿ ಸಾಧನೆ ಪ್ರಯತ್ನ ಮಾಡಲಿ. ಅವರ ಜೀವನ ಎಲ್ಲರಿಗೂ ದಾರಿದೀಪವಾಗಲಿ ಎಂದು ಆಶಿಸುತ್ತೇನೆ ಎಂದರು.

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಕೇಂದ್ರ ಬರ ಅಧ್ಯಯನ ತಂಡ ಅಧ್ಯಯನ ಮಾಡಿ ವಾಸ್ತವಿಕತೆಯ ವರದಿ ನೀಡಿದ್ದರೂ ಈವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರ ಬಿಡುಗಡೆಯಾಗಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಜಗತ್ತಿನ ಕಷ್ಟ-ದುಃಖಗಳೆಲ್ಲ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟು ಕಟುಕವಾಗಿರುವುದು ಯಾಕೆ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ  ಕಿಡಿ ಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ವಿಚ್ಛೇದನ ಸಂಖ್ಯೆ ಶೇಕಡಾ 1 ರಷ್ಟು