Publish Date: Mon, 06 Oct 2025 (19:03 IST)
Updated Date: Mon, 06 Oct 2025 (19:06 IST)
ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವನೆ ಮಾಡಿ ಮಕ್ಕಳು ಸಾವನ್ನಪ್ಪಿದ ಬಳಿಕ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಸಭೆ ನಡೆಸಿ, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಅದರ ಪ್ರಕಾರ 2 ವರ್ಷದೊಳಗಿನ ಮಕ್ಕಳಿಗೆ ಇನ್ಮುಂದೆ ಸಿರಪ್ ನೀಡುವಂತಿಲ್ಲ. 2-5 ವರ್ಷದ ಮಕ್ಕಳಿಗೆ ತಜ್ಞರ ಸಲಹೆ ಮೇರೆಗೆ ಔಷಧಿ ನೀಡಬೇಕು. ಅಲ್ಲದೇ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ನೀಡಬೇಕು. ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಬೇಕು. ಮಲ್ಟಿಮೆಡಿಸನ್ ಒಳಗೊಂಡ ಸಿರಪ್‌ಗಳನ್ನ ಬಳಸಬಾರದು ಎಂದು ತಿಳಿಸಿದೆ.
ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್‌ಗಳನ್ನು ಖರೀದಿಸುವಂತಿಲ್ಲ ಹಾಗೂ ಬಳಸಬಾರದು. ಅದಲ್ಲದೆ ಹಿಂದೆ ಬಳಸಿದ ಔಷಧಿಗಳನ್ನ ಮರುಬಳಕೆ ಮಾಡಬಾರದು.
ಕೆಮ್ಮು ಉಲ್ಬಣಗೊಂಡರೆ ವೈದ್ಯರನ್ನ ಸಂಪರ್ಕಿಸಿ. ಅವಧಿ ಮೀರಿದ ಔಷಧಿಗಳನ್ನ ನೋಡಿ ಬಳಸಬೇಕು. ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ ವಾಂತಿ ಅಥವಾ ಉಸಿರಾಟ ತೊಂದರೆ ಇದ್ದರೆ ಹತ್ತಿರದ ವೈದ್ಯರನ್ನ ಸಂಪರ್ಕಿಸಿ. ಔಷಧ ಅವಧಿ ಮುಗಿಯುವ ದಿನಾಂಕವನ್ನು ಪರಿಶೀಲಿಸಿ ಮತ್ತು ಲೇಬಲ್‌ಗಳನ್ನು ಎಚ್ಚರಿಕೆಯಿಂದ ಓದಿ ಎಂದು ಸೂಚಿಸಲಾಗಿದೆ.
ಮಾರ್ಗಸೂಚಿ ಹೀಗಿದೆ:
– ಚಿಕ್ಕಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ.
– 1 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಮತ್ತು ಶೀತದ ಸಿರಪ್ ನೀಡಬೇಡಿ.
– 2.2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ಸಲಹೆ ಮೇರೆಗೆ ಮಾತ್ರ ಔಷಧಿ ನೀಡಬೇಕು.
ಹಿರಿಯ ಮಕ್ಕಳಿಗೆ ಏನು ಸಲಹೆ?
– ಕೆಮ್ಮಿನ ಸಿರಪ್ ವೈದ್ಯರ ಸಲಹೆ ಮೇರೆಗೆ ಸ್ವೀಕರಿಸಬೇಕು.
– ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕಡಿಮೆ ಡೋಸ್ ಅನ್ನು ಬಳಸಬೇಕು.
– ಬಹುಔಷಧ ಸಂಯೋಜನೆ ಇರುವ ಸಿರಪ್‌ಗಳನ್ನು ಬಳಸಬಾರದು.
ಮನೆ ಮದ್ದುಗಳು:
– ಸಾಕಷ್ಟು ದ್ರವರೂಪದ ಪದಾರ್ಥ ನೀಡುವುದು.
– ಸಾಕಷ್ಟು ವಿಶ್ರಾಂತಿ ಮತ್ತು ನಿದ್ದೆ ಮಾಡಲು ಹೆಚ್ಚಿನ ಅವಕಾಶ ನೀಡಿ.
– ಪೌಷ್ಠಿಕ ಆಹಾರಕ್ಕೆ ಹೆಚ್ಚಿನ ಒತ್ತಡ