Select Your Language

Notifications

webdunia
webdunia
webdunia
webdunia

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿಎಸ್ ಯಡಿಯೂರಪ್ಪ ಪತ್ರ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿಎಸ್ ಯಡಿಯೂರಪ್ಪ ಪತ್ರ
bengaluru , ಭಾನುವಾರ, 24 ಏಪ್ರಿಲ್ 2022 (16:51 IST)

ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.
ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ವಿಮಾನ ನಿಲ್ದಾಣಕ್ಕೆ ಯಡೊಯೂರಪ್ಪ ಹೆಸರಿಡಲಾಗುವುದು ಎಂದು ಘೋಷಿಸಿದ್ದರು.

ಯಡಿಯೂರಪ್ಪ ಅವರು ಸಿಎಂ ಗೆ ಪತ್ರ ಬರೆದು ವಿಮಾನ ನಿಲ್ದಾಣಕ್ಕೆ ಬೇರೆ ಮಹನೀಯರ ಹೆಸರನ್ನು ಇಡಿ. ನನ್ನ ಹೆಸರು ಬೇಡ ಎಂದು ಮನವಿ ಮಾಡಿದ್ದಾರೆ.

ಸಿಎಂಗೆ ಅವರು ಬರೆದಿರುವ ಪತ್ರದಲ್ಲಿ, ಶಿವಮೊಗ್ಗದ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ಸದಸ್ಯರು, ಸಂಘ ಸಂಸ್ಥೆಗಳು ಹಾಗೂ ಎಲ್ಲ ಮುಖಂಡರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ. ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾ ಭಾವ ನನ್ನದು. ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ತಮ್ಮ ನಿರ್ಧಾರವನ್ನು ಪುನರ್ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಹೊಸ ವಿಮಾನ ನಿಲ್ದಾಣಕ್ಕೆ


Share this Story:

Follow Webdunia kannada

ಮುಂದಿನ ಸುದ್ದಿ

ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: 1441 ಸ್ಕೂಟರ್ ವಾಪಸ್ ಪಡೆದ ಓಲಾ!