Select Your Language

Notifications

webdunia
webdunia
webdunia
webdunia

ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ಯಾವುದೇ ಅನುಮಾನ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್‌

ವಿಕ್ರಂ ಗೌಡ ಎನ್‌ಕೌಂಟರ್‌ ಬಗ್ಗೆ ಯಾವುದೇ ಅನುಮಾನ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್‌

Sampriya

ಬೆಂಗಳೂರು , ಬುಧವಾರ, 20 ನವೆಂಬರ್ 2024 (14:56 IST)
ಬೆಂಗಳೂರು: ವಿಕ್ರಂ ಗೌಡ ಎನ್‌ಕೌಂಟರ್‌ ವಿಚಾರದಲ್ಲಿ ಯಾವುದೇ ಅನುಮಾನ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಎನ್‌ಕೌಂಟರ್ ಬಗ್ಗೆ ಕೆಲ ಎಡಪಂಥೀಯರು ಅನುಮಾನ ವಿಚಾರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ ವಿಕ್ರಮ್ ಗೌಡ ಬಳಿ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು.

ವಿಕ್ರಮ್ ಮೇಲೆ ಕೊಲೆ ಆರೋಪ ಸೇರಿ 60 ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಪೊಲೀಸರು ಶೂಟ್ ಮಾಡದಿದ್ದರೆ ವಿಕ್ರಮ್ ಗೌಡ ಪೊಲೀಸರನ್ನೇ ಶೂಟ್ ಮಾಡುವ ಸಾಧ್ಯತೆ ಇತ್ತು. ಹೀಗಾಗಿ ಎನ್‌ಕೌಂಟರ್ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ನಕ್ಸಲ್ ಚಟುವಟಿಕೆ ಜಾಸ್ತಿಯಾಗಿದೆ ಎಂಬ ಶಾಸಕ ಸುನೀಲ್ ಕುಮಾರ್ ಆರೋಪಕ್ಕೆ, ನಕ್ಸಲ್ ನಿಗ್ರಹ ಪಡೆಯ ಕೇಂದ್ರ ಸ್ಥಳ ಕಾರ್ಕಳದಲ್ಲೇ ಇದೆ. ನಕ್ಸಲ್ ನಿಗ್ರಹ ದಳ ಸತತವಾಗಿ ನಕ್ಸಲರ ಚಟುವಟಿಕೆ ಮೇಲೆ ನಿಗಾ ಇಟ್ಟುಕೊಂಡೇ ಬಂದಿತ್ತು. ಆದರೆ ಕಳೆದ 15 ದಿನಗಳ ಹಿಂದೆ ನಕ್ಸಲ್ ಮುಖಂಡರಾದ ಲತಾ ಹಾಗೂ ರಾಜು ಕಾಣಿಸಿಕೊಂಡರು. ಆಗ ಕೂಂಬಿಂಗ್ ಮಾಡುವುದಕ್ಕೆ ಶುರು ಮಾಡಿದರು ಎಂದು ತಿಳಿಸಿದರು.  

ಎನ್‌ಕೌಂಟರ್ ಮೇಲೆ ತನಿಖೆ ಆಗಬೇಕು ಅಂತ ಕೆಲವರು ಮಾಧ್ಯಮಗಳಲ್ಲಿ ಹೇಳಿದ್ದಾರೆ. ಮಷಿನ್ ಗನ್ ಇಟ್ಟುಕೊಂಡಿದ್ದ 60 ಪ್ರಕರಣ ಇರುವ ವಿಕ್ರಮ್ ಗೌಡ ಎನ್‌ಕೌಂಟರ್ ಬಗ್ಗೆ ಯಾವ ದೃಷ್ಟಿಯಿಂದ ತನಿಖೆ ಮಾಡಬೇಕು ಹೇಳಿ ಎಂದು ಪ್ರಶ್ನಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವರಿಗೆ ಕನ್ನಡ ಬರಲ್ಲ ಎಂದು ನಕ್ಕ ವಿದ್ಯಾರ್ಥಿ: ಗರಂ ಆಗಿ ಕ್ರಮ ಕೈಗೊಳ್ಳಿ ಎಂದ ಸಚಿವ ಮಧು ಬಂಗಾರಪ್ಪ