ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಈ ಸಂಬಂಧ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಸಿಬಿಐಗೆ ಆಗ್ರಹ ಮಾಡುತ್ತಿದ್ದಾರೆ. ಆದರೆ ಈಗಾಗಲೇ ತನಿಖೆ ನಡೆಯುತ್ತಿದ್ದು, ಇದನ್ನು ಸಿಬಿಐಗೆ ವಹಿಸುವ ಅಗತ್ಯ ಏನಿಲ್ಲ. ಪೊಲೀಸರು ತನಿಖೆಯನ್ನು ಮಾಡುತ್ತಿದ್ದು, ಏನಾದರೂ ಲೋಪವಿದ್ದರೆ ತಿಳಿಯುತ್ತದೆ. ಆ ಸಂದರ್ಭದಲ್ಲಿ ಬೇರೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿದರು. ಸದಾಶಿವನಗರದ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಪರಮೇಶ್ವರ್ ಗಂಟೆಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
ಈಚೆಗೆ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ವಿದ್ಯಮಾನದ ಬಗ್ಗೆ ಭೇಟಿ ವೇಳೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕರ್ನಾಟಕ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಸಂಬಂಧವೂ ಅಸಮಧಾನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಖರ್ಗೆ ಹಾಗೂ ಪರಮೇಶ್ವರ್ ಭೇಟಿ ಕುತೂಹಲ ಮೂಡಿಸಿದೆ.