Publish Date: Fri, 03 Mar 2023 (15:09 IST)
Updated Date: Fri, 03 Mar 2023 (15:10 IST)
ಮೈಸೂರು : ನನಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಫರ್ಗಳು ಬರಲಿಲ್ಲ. ಸಚಿವ ನಾರಾಯಣ ಗೌಡ ಅವರ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ನನಗೆ ಆಫರ್ ಬರಲಿಲ್ಲ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಿ ಎಂದು ಜವಾಬ್ದಾರಿ ಕೊಟ್ಟಿದ್ದಾರೆ. ಆ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಒಂದು ತಿಂಗಳಿನಿಂದ ಬರದಿರುವುದಕ್ಕೆ ಚುನಾವಣೆ ಕಾರಣವಲ್ಲ. ಇಲಾಖೆಯ ಬೇರೆ ಬೇರೆ ಕಾರ್ಯಕ್ರಮಗಳ ಕಾರಣದಿಂದಾಗಿ ಬೇರೆ ಜಿಲ್ಲೆಗಳಿಗೆ ಓಡಾಡುತ್ತಿದ್ದೇನೆ. ಹೀಗಾಗಿ ಬರಲಿಲ್ಲ ಅಷ್ಟೆ. ವಿಜಯ ಸಂಕಲ್ಪ ಯಾತ್ರೆಯಲ್ಲಿ ನನಗೆ ಬೆಂಗಳೂರು ಜವಾಬ್ದಾರಿ ಇದೆ. ಅಲ್ಲಿ ಆ ಕೆಲಸ ಮಾಡುತ್ತಿದ್ದೇನೆ ಎಂದರು.