ಬೆಂಗಳೂರು: ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಅದನ್ನು ಹಜೈಕಮಾಂಡ್ ತೀರ್ಮಾನಿಸುತ್ತೆ ಎಂದು ಕೌಂಟರ್ ನೀಡಿದ್ದಾರೆ.
ಸದ್ಯ ರಾಜ್ಯರಾಜಕಾರಣದಲ್ಲಿ ವೀರಪ್ಪ ಮೊಯ್ಲಿ ಹೇಳಿಕೆ ತೀವ್ರ ಸಂಚಲನ ಸೃಷ್ಟಿಸಿದೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ ಎಂದರು.
ಮೊಯ್ಲಿ ಅಥವಾ ಮತ್ಯಾರೋ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಅಗಲ್ಲ, ಅದು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವ ವಿಷಯ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದರು.