Publish Date: Fri, 03 Nov 2017 (14:04 IST)
Updated Date: Fri, 03 Nov 2017 (14:06 IST)
ಯಾರೇ ಅಡ್ಡ ಬಂದ್ರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಹಿರಿಯ ನಟ, ಬಿಜೆಪಿ ಮುಖಂಡ ಜಗ್ಗೇಶ್ ಹೇಳಿದ್ದಾರೆ.
ತುರುವೇಕೆರೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಅವರು, ರಾಜ್ಯದ ಜನತೆ ಸಿಎಂ ಸಿದ್ದರಾಮಯ್ಯ ಏನೋ ಮಾಡ್ತಾರೆ ಎಂದು ಅಧಿಕಾರ ಕೊಟ್ಟರು. ಆದರೆ, ಸಿಎಂ ಸಿದ್ದರಾಮಯ್ಯ ಕಾರ್ಯವೈಖರಿಯಿಂದ ರಾಜ್ಯದ ಜನತೆಗೆ ನಿರಾಸೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಣ್ಣಮಕ್ಕಳು ಕೂಡಾ ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಹೇಳುತ್ತವೆ. ಮುಂಬರುವ ದಿನಗಳಲ್ಲಿ ಜನತೆ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನೀಡಿದ ಅನುದಾನದಿಂದ ತುರುವೇಕೆರೆ ಕ್ಷೇತ್ರ ಅಭಿವೃದ್ಧಿಯಾಗಿದೆ. ಬಿಎಸ್‌ವೈ ಮತ್ತೆ ಸಿಎಂ ಆಗಬೇಕು ಎನ್ನುವುದೇ ರಾಜ್ಯದ ಜನತೆಯ ಬಯಕೆಯಾಗಿದೆ ಎಂದು ಹಿರಿಯ ನಟ ಜಗ್ಗೇಶ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.