Publish Date: Tue, 22 Aug 2017 (12:45 IST)
Updated Date: Tue, 22 Aug 2017 (12:48 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಸಂಸದ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಸಮ್ಮಿಶ್ರ ಸರಕಾರ ಬಂದಾಗಲೂ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಹಲವು ರಾಜಕಾರಣಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.ಆದರೆ, ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು ಎನ್ನುವುದು ಯಾರೂ ಮರೆತಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಮ್ಮಿಶ್ರ ಸರಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದಾರೆ. ದಲಿತರ ಮನೆಗಳಲ್ಲಿ ವಾಸ್ತವ್ಯ ಹೂಡಿದ್ದಾರೆ. ಅನೇಕ ನೀರಾವರಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ ಎಂದರು.
ಮುಂದಿನ ಚುನಾವಣೆಯ ನಂತರ ರಾಜ್ಯದಲ್ಲಿ ಜೆಡಿಎಸ್ ಸರಕಾರ ಅಧಿಕಾರದಲ್ಲಿರಲಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವದನ್ನು ತಡೆಯಲು ಸಾಧ್ಯವಿಲ್ಲ ಎಂದು ಸಂಸದ ಸಿ.ಎಸ್.ಪುಟ್ಟರಾಜು ಸವಾಲ್ ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.