ಕೊರೊನಾ ವೈರಸ್ ಶಂಕೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ನಾಪತ್ತೆಯಾಗಿ ಬಳಿಕ ಪತ್ತೆಯಾದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಲಕ್ಷಣಗಳು ಇಲ್ಲ.
									
										
								
																	
ವ್ಯಕ್ತಿಯ ಪ್ರಯೋಗಾಲಯದ ವರದಿ ಬಂದಿದ್ದು, ಆತನಿಗೆ ಕೊರೊನಾ ಸೋಂಕು ಇಲ್ಲ ಎಂದು ದೃಢಪಟ್ಟಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.
									
			
			 
 			
 
 			
			                     
							
							
			        							
								
																	ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರೆಗೆ 10 ಮಂದಿಯ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಇದರಲ್ಲಿ ಏಳು ರಿಪೋರ್ಟ್ ಬಂದಿದೆ. ಈ ವರದಿಯಂತೆ ಯಾರಿಗೂ ಕೊರೊನಾ ಸೋಂಕು ಇಲ್ಲ ಎಂದು ಸ್ಪಷ್ಟಪಡಿಸಿದರು.