Publish Date: Sat, 16 Nov 2024 (15:34 IST)
Updated Date: Sat, 16 Nov 2024 (15:39 IST)
ಶಿವಮೊಗ್ಗ: ಬಿಜೆಪಿಯು ಸರ್ಕಾರವನ್ನು ಬೀಳಿಸುವ ಯತ್ನ ನಡೆಸುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇದು ಹುಚ್ಚುತನದ ಪರಮಾವಧಿ ಎಂದು ವ್ಯಂಗ್ಯಮಾಡಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವನ್ನು ಬೀಳಿಸುವ ಕೆಲಸ ಯಾರು ಮಾಡುತ್ತಿಲ್ಲ. ಬಿಜೆಪಿ ಶಾಸಕರನ್ನೂ ಯಾರು ಕರೆಯುತ್ತಿಲ್ಲ. ಕಾಂಗ್ರೆಸ್ ಶಾಸಕರನ್ನೂ ಯಾರು ಕರೆಯುತ್ತಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.
ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮುಗಿದಿದೆ. ಈ ಎಲ್ಲ ಕ್ಷೇತ್ರಗಳಲ್ಲಿ ಒಳ್ಳೆಯ ವಾತಾವರಣವಿತ್ತು. ಜನರಿಂದ ಒಳ್ಳೆಯ ಬೆಂಬಲ ವ್ಯಕ್ತವಾಗಿದ್ದರಿಂದ ಮೂರು ಕ್ಷೇತ್ರಗಳಲ್ಲಿಯೂ ಎನ್‌ಡಿಎ ಅಭ್ಯರ್ಥಿ ಗೆಲುವು ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಕ್ಫ್ ಬೋರ್ಡ್ ವಿರುದ್ಧ ಕಮಿಟಿ ರಚನೆ ವಿಚಾರವಾಗಿ, ವಕ್ಫ್ ಬೋರ್ಡ್ ಆಸ್ತಿ ಕಬಳಿಕೆ ವಿರುದ್ಧ ಬಿಜೆಪಿ ಕಮಿಟಿ ರಚನೆ ಮಾಡಿದ್ದೇವೆ. ಈ ಕಮಿಟಿ ರಾಜ್ಯದಲ್ಲಿ ಪ್ರವಾಸ ಮಾಡಿ ಬಳಿಕ ವರದಿ ಕೊಡಲಿದೆ. ವರದಿಯನ್ನು ಪಡೆದ ನಂತರ ಮುಂದಿನ ಹೋರಾಟ ನಿರ್ಧಾರವಾಗಲಿದೆ ಎಂದು ಅವರು ತಿಳಿಸಿದ್ದಾರೆ.