Webdunia - Bharat's app for daily news and videos

Install App

ಮೈತ್ರಿ ಸರ್ಕಾರಕ್ಕೆ ಧಕ್ಕೆ ತರುವಂತಹ ಹೇಳಿಕೆಯನ್ನು ಯಾರೂ ನೀಡಬಾರದು-ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ ಕಾಂಗ್ರೆಸ್

Webdunia
ಮಂಗಳವಾರ, 19 ಫೆಬ್ರವರಿ 2019 (10:51 IST)
ಬೆಂಗಳೂರು : ಅತೃಪ್ತ ಕೈ ಶಾಸಕರಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆಯುಂಟಾಗಬಾರದು ಎಂಬ ನಿಟ್ಟಿನಲ್ಲಿ ಅತೃಪ್ತರಿಗೆ ಕೆಪಿಸಿಸಿ ಖಡಕ್ ಎಚ್ಚರಿಕೆಯೊಂದನ್ನು ನೀಡಿದೆ.


ಮಾಜಿ ಸಚಿವ ರಾಮಲಿಂಗ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಧಕ್ಕೆ ತರುವಂತಹ ಹೇಳಿಕೆಯನ್ನು ಯಾರೂ ನೀಡಬಾರದು, ಏನೇ ಅಭಿಪ್ರಾಯವಿದ್ದರೂ ಪಕ್ಷದ ಚೌಕಟ್ಟಿನೊಳಗೆ ಹಂಚಿಕೊಳ್ಳಬೇಕು. ಸೀಟು ಹಂಚಿಕೆ ಸಂಬಂಧದಲ್ಲೂ ಅನಾವಶ್ಯಕ ಹೇಳಿಕೆ ಕೊಡಬಾರದು, ಈ ಸೂಚನೆ ಮೀರಿದರೆ ಗಂಭೀರವಾಗಿ ಪರಿಗಣಿಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ.


ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಸೇರಿದಂತೆ ಪ್ರಮುಖಗರು ಸಭೆಯಲ್ಲಿ ಭಾಗಿಯಾಗಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments